ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
ಈ ಕುರಿತು ಮಾಹಿತಿ ನೀಡಿದ ವಾಟಾಳ್ ನಾಗರಾಜ್, ಕರ್ನಾಟಕ ಬಂದ್ ಮಾಡಬೇಕಾ ಬೇಡ್ವಾ ಅನ್ನೋ ಬಗ್ಗೆ ತೀರ್ಮಾನ ಮಾಡಲು ಸಭೆ ಕರೆದಿದ್ದು, ಹಲವು ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮುಖಂಡರು ಬಂದ್‌ಗೆ ನೈತಿಕ ಬೆಂಬಲ ಅನ್ನೋರು ಮನೆಯಲ್ಲಿ ಕೂತುಕೊಳ್ಳಿ. ಸುಮ್ಮನೆ ಸಂಘಟನೆ ಯಾಕೆ ಇಟ್ಟುಕೊಳ್ತಿರಾ? ಅನೇಕ ಕನ್ನಡಪರ ಸಂಘಟನೆಗಳು ನಮಗೆ ಬೆಂಬಲ ಕೊಟ್ಟಿದೆ. ನಾವು ಮಾರ್ಚ್ 22ರಂದು ಬಂದ್ ಮಾಡೇ ಮಾಡ್ತಿವಿ. ಕರ್ನಾಟಕ ಬಂದ್‌ಗೆ ಇನ್ನೂ 3 ದಿನಗಳ ಕಾಲಾವಕಾಶ ಇದೆ. ಬಂದ್ ಸಂಪೂರ್ಣ ಯಶಸ್ವಿ ಆಗಲಿದೆ ಎಂದರು.
ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಬಂದ್ ಆಗೋದು ನಿಶ್ಚಿತ. ಬೆಳಗ್ಗೆ 10:30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ ಎಂದರು.
ನೆರೆ ರಾಜ್ಯ ಮತ್ತು ಸಂಸತ್ ಗಮನ ಸೆಳೆಯಲು ಬಂದ್ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಹೊಡೆಯುತ್ತಿದ್ದಾರೆ. ಬಿಹಾರಿಗಳು, ಪಂಜಾಬಿಗಳು, ಬಂಗಾಳದವರು ಹೊಡೆಯುತ್ತಿದ್ದಾರೆ. ಮಹಾರಾಷ್ಟ್ರದವರು ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದಾರೆ.ತಮಿಳು ತೆಲುಗು ಮರಾಠಿಗರು ಮಾರ್ವಾಡಿಗಳು, ರಾಜ್ಯದಲ್ಲಿ ವ್ಯವಹಾರ ನಡೆಸಿ ಕೋಟಿ ಕೋಟಿ ರೂಪಾಯಿ ಸಂಪಾದಿಸುತ್ತಿದ್ದಾರೆ. ಪರಭಾಷಿಕರು ಕನ್ನಡ ಭಾಷೆ ಕಲಿಯಲ್ಲ ವ್ಯವಹಾರ ಮಾಡುತ್ತಾರೆ. ಕರ್ನಾಟಕದಲ್ಲಿ ವ್ಯವಹಾರ ಮಾಡಿ ಕೋಟಿ ಕೋಟಿಗೊಳಿಸುತ್ತಿದ್ದಾರೆ. ಇವರು ಕನ್ನಡ ಕಲಿಯಬೇಕು ಇಲ್ಲದಿದ್ದರೆ ಕರ್ನಾಟಕವನ್ನು ತೊರೆಯಲಿ ನಾವು ಚಳವಳಿ ಮಾಡಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.
ಮಾರ್ಚ್ 22 ರಂದು ಯಾರು ಮೆಟ್ರೋ ಹತ್ತಬೇಡಿ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತಾನಾಡಿದ್ದೇವೆ. ಅವತ್ತು ಬಸ್ ಓಡಿಸಬಾರದೆಂದು ಹೇಳಿದ್ದೇವೆ. ಇನ್ನೂ ಒಂದು ಸಲ ಹೇಳುತ್ತೇವೆ ಅವತ್ತು ಬಸ್ ಓಡಿಸಬಾರದು. ಮಂತ್ರಿ, ಸಿಎಂ ಕಾರಿನ ಚಾಲಕರೇ ಆಗಿರಲಿ, ಮಾನ ಮರ್ಯಾದೆ ಗೌರವ ಅಭಿಮಾನ ಸ್ವಾಭಿಮಾನಕ್ಕೆ ಅಂದು ಗಾಡಿ ಹತ್ತಬೇಡಿ.ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಹಿಂದಿಯಲ್ಲಿ ಭಾಷಣ ಮಾಡ್ತಾ ಇದ್ದಾರೆ. ವಿಧಾನಸಭೆಯೊಳಗೆ ಯಾಕೆ ಯಾರು ಇದನ್ನು ವಿರೋಧ ಮಾಡಿಲ್ಲ. ಮೂಕಪ್ರೇಕ್ಷಕರಂತೆ ಮಾನ ಮರ್ಯಾದೆ ಇಲ್ಲದೇ ಶಾಸಕರು ಸುಮ್ಮನಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು, ದರೋಡೆಕೋರರು, ಕನ್ನಡ ಕಲಿಸಲ್ಲ ಅಂತ ನ್ಯಾಯಾಲಯಕ್ಕೆ ಹೋಗ್ತಾರೆ. ಚಾಲಕರು ಯಾರೇ ಇರಲಿ, ಬಸ್ ಆಟೋ, ಕಾರು ಚಾಲಕರಿಗೆ ಇದು ಸ್ವಾಭಿಮಾನ, ಮರ್ಯಾದೆ ಪ್ರಶ್ನೆಯಾಗಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.