ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ಬಂದ್ ಕುರಿತಂತೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ನಾಳೆ ಶಾಲಾ-ಕಾಲೇಜುಗಳು ಬಂದ್ ಕುರಿತಂತೆ ಇನ್ನೂ ತೀರ್ಮಾನಿಸಿಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಶಾಲಾ-ಕಾಲೇಜು ರಜೆ ಬಗ್ಗೆ ಈವರೆಗೆ ಯಾವುದೇ ತೀರ್ಮಾನ ಮಾಡಿಲ್ಲ.ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಶಾಲೆ ಬಂದ್ ಮಾಡುವ ನಿರ್ಧಾರ ಮಾಡಿಲ್ಲ. ಗೃಹ ಸಚಿವ ಹಾಗೂ ಸಾರಿಗೆ ಸಚಿವರ ಜೊತೆ ಈ ವಿಚಾರವಾಗಿ ಮಾತುಕತೆ ನಡೆಸುತ್ತೇನೆ. ಅವರು ಏನು ಹೇಳ್ತಾರೆ ಅದರ ಮೇಲೆ ನಿರ್ಧಾರ ಮಾಡಲಾಗುತ್ತದೆ ಎಂದಿದ್ದಾರೆ.
ನಾಳೆ ಮೌಲ್ಯಾಂಕನ ಪರೀಕ್ಷೆ ಇದೆ. ಆದರೆ ಗೃಹ ಇಲಾಖೆ ಹಾಗೂ ಸಾರಿಗೆ ಇಲಾಖೆಯ ನಿರ್ಧಾರ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.