ಶಾಸಕ ಮಂಜುನಾಥ್ ವಿರುದ್ಧದ ತನಿಖೆ ಪೂರ್ಣಗೊಳಿಸಿ: ಪೊಲೀಸರಿಗೆ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಾಸಕ ಜಿ.ಮಂಜುನಾಥ್‌ ಅವರ ವಿರುದ್ಧದ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ರಾಜ್ಯ ಪೊಲೀಸರಿಗೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.

ಐಪಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಕೋಲಾರದ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಮಂಜುನಾಥ್ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ಈ ಆದೇಶ ನೀಡಿದ್ದಾರೆ.

ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದರೂ ಅಪರಾಧ ಕುರಿತು ಇನ್ನೂ ತನಿಖೆ ಮಾಡಿಲ್ಲ. 6 ವರ್ಷಗಳು ಕಳೆದಿವೆ. ಸುಪ್ರೀಂ ಕೋರ್ಟ್ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿದೆ. ಹೈಕೋರ್ಟ್ ಕೂಡ ಅರ್ಜಿಯನ್ನು ವಿಲೇವಾರಿ ಮಾಡುವಾಗ ಇದು ವಂಚನೆಗೆ ಸಮಾನ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಸುಳ್ಳು ಎಂಬ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಚುನಾವಣೆಗೆ ಸ್ಪರ್ಧಿಸಿರುವುದು ಸ್ಪಷ್ಟವಾಗಿದೆ. ನಿಜವಾಗಿ ಪರಿಶಿಷ್ಟ ಜಾತಿಗೆ ಸೇರಿದ್ದವರಿಂದ ಕ್ಷೇತ್ರವನ್ನು ಕಸಿದುಕೊಂಡು ಶಾಸಕರೂ ಆಗಿರುವುದು ಸ್ಪಷ್ಟವಾಗಿದೆ. ಇದು ಅಪರಾಧ ಎಂದು ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!