ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರದಲ್ಲಿ ಕಂಪೌಂಡ್ ಗೋಡೆ ಮನೆಯ ಮೇಲ್ಗಡೆ ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಮನೆಯಲ್ಲಿ ವಾಸ್ತವ್ಯವಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ (40) ಮತ್ತು ಇಬ್ಬರು ಮಕ್ಕಳಾದ ರಿಹಾನ (11) ಮತ್ತು ರಿಫಾನ (17) ಮೃತಪಟ್ಟಿದ್ದಾರೆ.
ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ.ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ, ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಸೇರಿ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಮತ್ತೊಂದು ಹೆಣ್ಮಗಳ ಮೃತದೇಹವನ್ನು ಹೊರತೆಗೆದಿದ್ದಾರೆ.
ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ ನೀಡಿ ಸಂತಾಪ ವ್ಯಕ್ತಪಡಿಸಿದ್ದು ಮೃತ ನಾಲ್ವರಿಗೂ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.