ಮೈಸೂರು ಸೇರಿ ಐದು ಮಹಾನಗರಗಳ ಸಮಗ್ರ ಅಭಿವೃದ್ಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸದಿಗಂತ ವರದಿ,ಮೈಸೂರು:

ಕೈಗಾರಿಕೆಗಳ ಬೆಳವಣಿಗೆಯಲ್ಲಿ ಮೈಸೂರು ಪ್ರಮುಖ ಪಾತ್ರವಹಿಸುತ್ತದೆ. ಹಾಗಾಗಿ ಬೆಂಗಳೂರು ನಂತರ ಮೈಸೂರಿಗೆ ಕೈಗಾರಿಕೋದ್ಯಮಿಗಳು ಬರುವುದಕ್ಕಾಗಿ ಕೈಗಾರಿಕಾ ಟೌನ್‌ಶಿಫ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬುಧವಾರ ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಬಿಜೆಪಿ ವಿಭಾಗ ವತಿಯಿಂದ ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರವಾಗಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಸ್ಯಾಟಿಲೈಟ್ ನಗರಗಳ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ಬಿಯಾಂಡ್ ಬೆಂಗಳೂರು ರಚನೆ ಮಾಡಿದ ಮೇಲೆ ಎರಡನೇ ಹಂತದ ನಗರಗಳಾದ ಮೈಸೂರು,ಮಂಗಳೂರು,ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗುಲ್ಬರ್ಗಾ ನಗರಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿಕೊಳ್ಳಲಾಗಿದೆ.
ಬೆಂಗಳೂರು ನಂತರದ ಎರಡನೇ ನಗರವಾಗಿ ಮೈಸೂರನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಮೈಸೂರಿನಲ್ಲಿ ಕೈಗಾರಿಕಾ ಟೌನ್‌ಶಿಫ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಪದವಿಗಳನ್ನು ನೀಡುವ ಜತೆಗೆ ಕೌಶಲ್ಯವುಳ್ಳ ಮಾನವ ಸಂಪನ್ಮೂಲ ವ್ಯಕ್ತಗಳನ್ನು ತಯಾರಿಸುವ ಕೆಲಸ ಮಾಡಬೇಕಾಗಿದೆ. 18ರಿಂದ 40 ವರ್ಷದೊಳಗಿನ ವ್ಯಕ್ತಿಗಳಿಗೆ ಮಾನವ ಸಂಪನ್ಮೂಲ ತುಂಬಲು ಒಂದೂವರೆ ಲಕ್ಷ ಜನರಿಗೆ ಉದ್ಯಮಿಯಾಗು-ಉದ್ಯೋಗ ನೀಡು ಯೋಜನೆಯಡಿ ತರಬೇತಿ ಕೊಡಿಸುವ ಕೆಲಸ ಆರಂಭಿಸಲಾಗಿದೆ ಎಂದು ನುಡಿದರು. ಕೇಂದ್ರಸರ್ಕಾರದ ಮುದ್ರಾ ಯೋಜನೆಯಡಿ ದೇಶದಲ್ಲಿ ಆರು ಕೋಟಿ, ಕರ್ನಾಟಕದಲ್ಲಿ 12 ಲಕ್ಷ ಜನರಿಗೆ ಉದ್ಯೋಗ ನೀಡಿ ಅನುಕೂಲಮಾಡಿಕೊಡಲಾಗಿದೆ. ಕೃಷಿ,ಸೇವಾ ಕ್ಷೇತ್ರಕ್ಕೆ ಹೆಚ್ಚುಒತ್ತು ನೀಡಲಾಗಿದೆ ಎಂದರು. ಹೊಸ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡ ಮೊದಲ ರಾಜ್ಯ ಕರ್ನಾಟಕವಾಗಿದೆ. ಬೇರೆ ಬೇರೆ ದೇಶಗಳಲ್ಲಿ ಶಿಕ್ಷಣ ಪದ್ಧತಿಯನ್ನು ಬದಲಿಸಿಕೊಂಡ ಪರಿಣಾಮ ಅಭಿವೃದ್ಧಿಗೆ ಕಾರಣವಾಗಿದೆ. ನೂತನ ಶಿಕ್ಷಣ ನೀತಿಯಲ್ಲಿ ಅತನಿಗೆ ಇಷ್ಟವಾಗಿದ್ದಕ್ಕೆ ಬದಲಾಯಿಸಿಕೊಳ್ಳಲು ಅವಕಾಶವಿದೆ. ಔದ್ಯೋಗಿಕ ಮತ್ತು ಉದ್ಯೋಗಿಕ ನೀತಿ ಮುಖ್ಯ. ಮೊದಲು ಆಸ್ತಿ, ಹಣವಿದ್ದವರಿಗೆ ಬೆಲೆ ಇರುತ್ತಿತ್ತು.ಈಗ ಜ್ಞಾನ ಹೊಂದಿದವರಿಗೆ ಮಾತ್ರ ಬೆಲೆ ಸಿಗುತ್ತಿದೆ. ನಮ್ಮ ಸರ್ಕಾರ ಶಿಕ್ಷಣ, ಆರೋಗ್ಯ,ಮಹಿಳಾ ಕ್ಷೇತ್ರಕ್ಕೆ ಒತ್ತು ನೀಡಿದೆ ಎಂದರು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್.ಟಿ.ಸೋಮಶೇಖರ್, ಸಿ.ನಾರಾಯಣಗೌಡ,ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಬಿ.ಹರ್ಷವರ್ಧನ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇAದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಮೈಸೂರು ನಗರ ಅಧ್ಯಕ್ಷ ಟಿ.ಎಸ್.ಶ್ರೀವತ್ಸ, ಗ್ರಾಮಾಂತರ ಜಿಲ್ಲಾ ಅಧ್ಯಕ್ಷೆ ಮಂಗಳಾ ಸೋಮಶೇಖರ್,ಕರ್ನಾಟಕ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಎನ್.ಆರ್.ಕೃಷ್ಣಪ್ಪಗೌಡ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ನಗರಪಾಲಿಕೆ ಮೇಯರ್ ಸುನಂದ ಪಾಲನೇತ್ರ, ಕರ್ನಾಟಕ ವಚನ ಬಾಲಮಂದಿರ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜು, ಮೈಸೂರು ಗ್ರಾಮಾಂತರ ಉಸ್ತುವಾರಿ ಅಶ್ವಥ್ ನಾರಾಯಣ್, ಮೈಸೂರು ನಗರ ಉಸ್ತುವಾರಿ ಹಿರೇಂದ್ರ ಷಾ, ನಗರ ಪ್ರಧಾನ ಕಾರ್ಯದರ್ಶಿಗಳಾದ ವಾಣೀಶ್ ಕುಮಾರ್,ವಿ.ಸೋಮಸುಂದರ್, ಎಚ್.ಜಿ.ಗಿರಿಧರ್,ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಮಾಜಿ ಅಧ್ಯಕ್ಷ ಆರ್.ರಘು ಕೌಟಿಲ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ತೋಂಟದಾರ್ಯ ಇನ್ನಿತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!