ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್ ಅಧಿವೇಶನ ನಾಳೆ ಕೊನೆಯಾಗಲಿದ್ದು, ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ಉಭಯ ಸದನದಲ್ಲಿ ಕಡ್ಡಾಯ ಹಾಜರಿರುವಂತೆ ವಿಪ್ ಜಾರಿಗೊಳಿಸಿದೆ.
ಬಜೆಟ್ ಅಧಿವೇಶನದ ಕೊನೆಯ ದಿನ(ಫೆ.10) ಕೆಲ ಪ್ರಮುಖ ಶಾಸಕಾಂಗ ವ್ಯವಹಾರಗಳ ಕುರಿತು ಸದನದಲ್ಲಿ ಚರ್ಚೆ ನಡೆಸಲಾಗುತ್ತದೆ. ಹೀಗಾಗಿ ಎಲ್ಲರು ಕಡ್ಡಾವಾಗಿ ಹಾಜರಾತಿ ಇರಬೇಕು ಎಂದು ಬಿಜೆಪಿ ಮುಖ್ಯ ಸಚೇತಕ ಲಕ್ಷ್ಮೀಕಾಂತ್ ಬಾಜ್‌ಪೇಯ್ ವಿಪ್ ಹೊರಡಿಸಿದ್ದಾರೆ.
ಲೋಕಸಭಾ ಚುನಾವಣೆ ಅಖಾಡಕ್ಕಿಳಿಯುವ ಮೊದಲು ನಡೆಯುತ್ತಿರುವ ಕೊನೆಯ ಅಧಿವೇಶನ ಇದಾಗಿದೆ. ಹೀಗಾಗಿ ಪ್ರಧಾನಿ ಮೋದಿ ಸರ್ಕಾರ ಕೆಲ ಅಚ್ಚರಿ ನೀಡುವ ಸಾಧ್ಯತೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸದನದಲ್ಲಿ ಕೆಲ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲು ಉದ್ದೇಶಿಸಲಾಗಿದೆ. ಉಭಯ ಸದನದಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಹೀಗಾಗಿ ಬಿಜೆಪಿಯ ಲೋಕಸಭಾ ಹಾಗೂ ರಾಜ್ಯಸಭೆಯ ಎಲ್ಲಾ ಸದಸ್ಯರು ಎರಡೂ ಸದನದಲ್ಲಿ ಹಾಜರಿರಬೇಕು. ಸಂಪೂರ್ಣ ದಿನ ಸದನದಲ್ಲಿ ಹಾಜರಿದ್ದು, ಸರ್ಕಾರದ ನಿರ್ಧಾರವನ್ನು ಬೆಂಬಲಿಸಲು ಈ ಮೂಲಕ ಕೋರಲಾಗಿದೆ ಎಂದು ಲಕ್ಷ್ಮೀಕಾಂತ್ ಬಾಜ್‌ಪೇಯ್ ವಿಪ್ ಹೊರಡಿಸಿದ್ದಾರೆ.