ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಬೇರೆ ರಾಜ್ಯಗಳಿಂದ ಬರುವವರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ ಮಾಡಿರುವುದಾಗಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.
ದೇಶದ ಯಾವುದೇ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬರುವ ಜನರು ಕಡ್ಡಾಯ ಆರ್ ಟಿಪಿಸಿಆರ್ ನ ನೆಗೆಟಿವ್ ವರದಿ ಪಡೆದಿರಬೇಕು ಎಂದು ಮಹಾ ಸರ್ಕಾರ ಸೂಚನೆ ನೀಡಿದೆ.
ಜೊತೆಗೆ ಲಾಕ್ ಡೌನ್ ಅವಧಿಯನ್ನು ಜೂನ್ 1ರ ಬೆಳಗ್ಗೆ 7ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.