Tuesday, March 28, 2023

Latest Posts

ವಿಧಾನ ಮಂಡಲ ಬಜೆಟ್ ಅಧಿವೇಶನದಲ್ಲಿ ಕಡ್ಡಾಯವಾಗಿ ಭಾಗಿಯಾಗಿ : ಸ್ಪೀಕರ್ ಕಾಗೇರಿ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ.

ಇದು ವಿಧಾನಸಭೆಯ ಕೊನೆಯ ಅಧಿವೇಶನವಾಗಿದ್ದು, ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಿ. ನಿರ್ಲಕ್ಷ್ಯ ಬೇಡ ಎಂದಿದ್ದಾರೆ. ಪ್ರಜಾಪ್ರಭುತ್ವದ ದೇಗುಲ ಈ ಸದನ ಇಲ್ಲಿಗೆ ಆಗಮಿಸುವ ಜವಾಬ್ದಾರಿಯನ್ನು ಯಾರೂ ಮರೆಯಬಾರದು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!