ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸಲು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ (ಎಐ) ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು. ಆದ್ದರಿಂದ ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಿದರು.
900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆಸಿದ್ದೇವೆ ಎಂದಿದ್ದಾರೆ.

