spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ರಾತ್ರಿ ಸಂಪುಟ ರಚನೆ ಕುರಿತು ತೀರ್ಮಾನ: ಸಿಎಂಬಸವರಾಜ ಬೊಮ್ಮಾಯಿ ಹೇಳಿದ್ದೇನು?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಂದು ರಾತ್ರಿ ಸಂಪುಟ ರಚನೆ ಕುರಿತು ತೀರ್ಮಾನವಾದರೆ ಬುಧವಾರ ಸಂಪುಟ ವಿಸ್ತರಣೆ ಆಗಲಿದ್ದು, ಸಭೆ ನಾಳೆಗೆ ಮುಂದೂಡಿಕೆಯಾದಲ್ಲಿ ನೂತನ ಸಚಿವರ ಪ್ರಮಾಣವಚನ ಮತ್ತೊಂದು ದಿನ ವಿಳಂಬವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ಪಕ್ಷದ ಪ್ರಮುಖರು, ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿದ್ದೇವೆ. ಸಭೆ ನಂತರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಮಾಡಲಾಗುತ್ತದೆ ಎಂದರು.
ರಾಜ್ಯದ ಮಾಜಿ ಸಚಿವರು, ಶಾಸಕರಲ್ಲಿ ಕೆಲವರು ಬಂದಿದ್ದಾರೆ. ಅವರ ಜೊತೆಯೂ ಚರ್ಚಿಸಿದ್ದೇನೆ. ಈಗಿರುವ ರಾಜಕೀಯ ಸನ್ನಿವೇಶದಲ್ಲಿ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಒಮ್ಮತದ ನಿರ್ಧಾರ ಆಗಬೇಕು ಎನ್ನುವುದು ನಮ್ಮೆಲ್ಲರ ಪ್ರಯತ್ನವಾಗಿದೆ.ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ ಎಂದು ನಮ್ಮೆಲ್ಲ ಶಾಸಕರಿಗೂ ಗೊತ್ತಿದೆ. ಎಲ್ಲ ಪ್ರಾದೇಶಿಕವಾರು ಆದ್ಯತೆ ಕುರಿತು ಚರ್ಚೆಯಾಗಲಿದೆ. ಹಿಂದಿನ ಸಚಿವ ಸಂಪುಟವನ್ನು ಗಮನದಲ್ಲಿಟ್ಟುಕೊಂಡು ಬ್ಯಾಲೆನ್ಸ್ ಮಾಡಿ ಸಂಪುಟ ರಚನೆ ಮಾಡಲಾಗುತ್ತದೆ ಎಂದರು.
ಎಷ್ಟು ಹಂತದಲ್ಲಿ ಸಂಪುಟ ರಚನೆ, ವಿಸ್ತರಣೆ ಆಗಬೇಕು, ಪ್ರಾದೇಶಿಕವಾರು ಹೇಗೆ ಆದ್ಯತೆ ನೀಡಬೇಕು. ಉಪಮುಖ್ಯಮಂತ್ರಿ ಸ್ಥಾನವೂ ಕೂಡ ಸೂತ್ರದ ಭಾಗವಾಗಿದೆ.ಮೊದಲಿಗೆ ಪ್ರಮಾಣವಚನ ಸ್ವೀಕಾರ ಮಾಡುವವರ ಸಂಖ್ಯೆ ನಿರ್ಧಾರವಾಗಬೇಕು. ನಂತರ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss