ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಖಂಡನೆ: ವಿಜಯಪುರದಲ್ಲಿ ಬೈಕ್‌ಗೆ ಹಗ್ಗಕಟ್ಟಿ ಎಳೆದು ಪ್ರತಿಭಟನೆ

ಹೊಸದಿಗಂತ ವರದಿ, ವಿಜಯಪುರ:

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೈಕ್‌ಗೆ ಹಗ್ಗಕಟ್ಟಿ ಎಳೆದು ನಗರದಲ್ಲಿ ಸೋಮವರ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು, ನಗರದ ಮಹಾತ್ಮ ಗಾಂಧಿ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಬೈಕ್‌ಗೆ ಹಗ್ಗಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಒಬಿಸಿ ಮೋರ್ಚಾ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಮಾತನಾಡಿ, ಕರ್ನಾಟಕ ರಾಜ್ಯ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನವಿರೋಧಿ ನೀತಿ ಎಂದೂ ಕಂಡಿಲ್ಲ. ಸುಳ್ಳು ಭರವಸೆ ನೀಡಿ, ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ. ಕೂಡಲೇ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆಯನ್ನು ಕಡಿತಗೊಳಿಸಿ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ದೇವರಹಿಪ್ಪರಗಿ ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ, ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ ಮಾತನಾಡಿ, ಪೆಟ್ರೋಲ್ ಬೆಲೆ ಲಿಟರ್ ಗೆ 3 ರೂ. ಡೀಸೆಲ್ ಬೆಲೆ 3.5 ರೂ. ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸಕಾರ ಕೈಗೊಂಡಿದೆ. ಬೆಲೆ ಏರಿಸಿದ ದರ ಹಿಂಪಡೆಯುವವರೆಗೂ ಬಿಜೆಪಿ ಹೋರಾಟ ನಿರಂತರವಾಗಿರುತ್ತದೆ ಎಂದರು.

ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಮುಖಂಡರಾದ ಮಂಜುನಾಥ ಮೀಸೆ, ಇಂಡಿಯ ಕಾಸುಗೌಡ ಬಿರಾದಾರ, ಗುರಲಿಂಗಪ್ಪ ಅಂಗಡಿ, ಸ್ವಪ್ನಾ ಕಣಮುಚನಾಳ, ಪಾಲಿಕೆ ಸದಸ್ಯ ಮಳುಗೌಡ ಪಾಟೀಲ, ಸಾಬು ಮಾಶ್ಯಾಳ, ಈರಣ್ಣ ರಾವುರ, ಪ್ರಭುಗೌಡ ಅಸ್ಕಿ, ಸಿದ್ದು ಬುಳ್ಳಾ, ಸುರೇಶ ಬಿರಾದಾರ, ಚಿದಾನಂದ ಚಲವಾದಿ, ವಿಜಯ ಜೋಶಿ, ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ, ಕಿರಣ ಪಾಟೀಲ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ವಿಠ್ಠಲ ಹೊಸಪೇಟೆ, ಸುಚೀತಾ ಜಾಧವ, ಮಧು ಪಾಟೀಲ, ಸುವರ್ಣ ಕುರ್ಲೆ, ಈರಣ್ಣ ಶಿರಮಗೊಂಡ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!