Sunday, December 4, 2022

Latest Posts

ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಿಗೆ ಷರತ್ತು ಬದ್ದ ಜಾಮೀನು: ಕಾಲೇಜಿನಿಂದ ಸಸ್ಪೆಂಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನ ಕಾಲೇಜಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ಪೊಲೀಸರು ವಶಕ್ಕೆ ಪಡೆದಿರುವ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದ್ದು, ಪ್ರಕರಣ ಸಂಬಂಧ ಪೊಲೀಸರು ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಓರ್ವ ಯುವಕ ಹಾಗೂ ಯುವತಿ ಈ ರೀತಿ ಕೂಗಿದ್ದ ವಿಡಿಯೋ ವೈರಲ್ ಆಗಿತ್ತು. ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವಕ ಹಾಗೂ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ.

ಸದ್ಯ ಪೊಲೀಸರು ಯುವಕ ಮತ್ತು ಯುವತಿಯ ಕಾಲೇಜ್ ಐಡಿ ಮತ್ತು ಆಧಾರ್ ಕಾರ್ಡ್​ ವಶಕ್ಕೆ ಪಡೆದು ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿದ್ಯಾರ್ಥಿಗಳು ಕ್ಷಮೆ ಕೇಳಿ, ತಮಾಷೆ ಎಂದು ಹೇಳಿಕೆ ನೀಡಿದ್ರೂ ವಿದ್ಯಾರ್ಥಿಗಳಿಂದ ಮುಚ್ಚಳಿಕೆ ಬರೆಸಿಕೊಂಡು ಸ್ಟೇಷನ್ ಬೇಲ್ ಆಧಾರದ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕಾಲೇಜು ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ದಾವಣೆಗೆರೆ ಮೂಲದ ರಿಯಾ (18), ಪಂಜಾಬ್ ಮೂಲದ ಆರ್ಯನ್ (18) ಮತ್ತು ಆಂಧ್ರ ಮೂಲದ 17 ವರ್ಷದ ವಿದ್ಯಾರ್ಥಿ ದಿನಕರ್ ವಿರುದ್ಧ ಐಪಿಸಿ 153, 505(1)B ಅಡಿಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!