ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಷ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿದಂತ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು, ಮಹಿಷ ದಸರಾ ಮಾಡುತ್ತೇವೆ ಎಂದು ಮನವಿ ಪತ್ರ ಕೊಟ್ಟಿದ್ದರು.
ಪುರಭವನದಲ್ಲಿ ಕಾರ್ಯಕ್ರಮ ನಡೆಸಲು ಷರತ್ತುಬದ್ಧ ಅನುಮತಿ ನೀಡಿದ್ದೇವೆ ಎಂದು ತಿಳಿಸಿದರು.
ಮಹಿಷಮೂರ್ತಿಗೆ ಪುಷ್ಪಾರ್ಚನೆ ಮಾಡಲು ಅನುಮತಿ ಹಾಗೂ ಇದಕ್ಕೆ ವಿರುದ್ಧವಾಗಿ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿದ್ದಾರೆ. ಈ ಹಿನ್ನಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಮಹಿಷ ಉತ್ಸವ, ಚಾಮುಂಡಿ ಚಲೋಗೆ ಮಾತ್ರ ನಿಷೇಧಾಜ್ಞೆ ಅನ್ವಯವಾಗುತ್ತದೆ. ಇನ್ನುಳಿದಂತೆ ಮದುವೆ, ಸಭೆ, ಸಮಾರಂಭ, ಶಾಲಾ-ಕಾಲೇಜಿಗೆ ಅನ್ವಯ ಆಗಲ್ಲ ಎಂದು ತಿಳಿಸಿದ್ದಾರೆ.