Thursday, September 4, 2025

ದೇಶದಲ್ಲೇ ಪ್ರಪ್ರಥಮ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಗೆ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೀಕ್ಷೆ ನಡೆಯುತ್ತಿದ್ದು, ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಯಲಿದೆ.

ಸಮೀಕ್ಷೆಯಲ್ಲಿ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಸಮೀಕ್ಷೆಗಳನ್ನು ನಡೆಸಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ