ಬಟಿಂಡಾ ಬಸ್‌ ನಿಲ್ದಾಣದಲ್ಲಿ ಅಗ್ನಿ ಅನಾಹುತ, ಓರ್ವ ಕಂಡಕ್ಟರ್‌ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಂಜಾಬ್‌ನ ಬಟಿಂಡಾದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ಬಟಿಂಡಾ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ರಮೇಣ ಅವು ಪಕ್ಕದ ಬಸ್‌ಗಳಿಗೂ ಹಬ್ಬಿದೆ. ಪರಿಣಾಮ ಮೂರು ಬಸ್ಸುಗಳು ಸುಟ್ಟು ಕರಕಲಾಗಿವೆ. ಬಸ್ಸಿನಲ್ಲಿ ಮಲಗಿದ್ದ ಕಂಡಕ್ಟರ್ ʻಸಜೀನಾʼ ಸಜೀವ ದಹನವಾಗಿದ್ದಾರೆ.

ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!