November 26, 2026
Thursday, November 26, 2026
spot_img

ಸೌಜನ್ಯಾಳಿಗೆ ನ್ಯಾಯ ಸಿಗಲಿದೆ ಎಂಬ ಭರವಸೆ ಇದೆ: ಎಸ್ಐಟಿ ತನಿಖಾ ವೈಖರಿಗೆ ತಿಮರೋಡಿ ಮೆಚ್ಚುಗೆ

ಹೊಸದಿಗಂತ ವರದಿ ಮಂಗಳೂರು:

ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನಿವಾಸಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರು ತನಿಖೆ ಆರಂಭಿಸಿರುವ ವಿಶೇಷ ತನಿಖಾ ದಳದಿಂದ ನ್ಯಾಯ ದೊರೆಯುವ ನಿರೀಕ್ಷೆ ಇದೆ ಎಂದು ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.

ಗುರುವಾರ ಎಸ್‌ಐಟಿ ಮುಂದೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಿದ ಅವರು, ಸೌಜನ್ಯ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಆದ್ದರಿಂದ 90 ದಿನಗಳಲ್ಲಿಯೇ ಪ್ರಕರಣದ ತನಿಖೆ ಪೂರ್ಣಗೊಳಿಸಬೇಕು ಎಂದು ನಾವು ಒತ್ತಾಯಿಸುವುದಿಲ್ಲ. ಈ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ನ್ಯಾಯ ಒದಗಿಸಬೇಕು ಎಂದರು.

ಇದನ್ನೂ ಓದಿ:

ಎಸ್‌ಐಟಿ ವಿಚಾರಣೆ ವೇಳೆ ನನ್ನಲ್ಲಿರುವ ಹಲವಾರು ದಾಖಲೆಗಳನ್ನು ಟೈಪ್ ಮಾಡಿದ ರೂಪದಲ್ಲಿ, ಕೈಬರಹದಲ್ಲಿ ಹಾಗೂ ಸಿಡಿಯಲ್ಲಿಯೂ ನೀಡಿದ್ದೇನೆ. ಎಸ್‌ಐಟಿ ಅಧಿಕಾರಿಗಳು ಇನ್ನೂ ಕೆಲವು ಮಾಹಿತಿಗಳನ್ನು ನೀಡುವಂತೆ ಕೇಳಿದ್ದಾರೆ. ಅವುಗಳನ್ನೂ ಒದಗಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು.

ಸೌಜನ್ಯಾ ಪ್ರಕರಣ ನಡೆದು 14 ವರ್ಷಗಳಾಗಿವೆ. ಇಷ್ಟು ಹಿಂದಿನ ಪ್ರಕರಣದ ತನಿಖೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಎಸ್‌ಐಟಿ ಅಧಿಕಾರಿಗಳು ಅದಕ್ಕೆ ಪೂರಕವಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ ಪ್ರಕರಣದ ಆಳಕ್ಕೆ ಇಳಿದು ತನಿಖೆ ನಡೆಸಬೇಕಾದರೆ ಇನ್ನೂ ಹೆಚ್ಚಿನ ಸಮಯ ಬೇಕಾಗುವ ಸಾಧ್ಯತೆಯಿದೆ ಎಂದರು.

Must Read

Skip to toolbar