ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 21 ಆರೋಪಿಗಳ ಪೈಕಿ ತಲೆಮರೆಸಿಕೊಂಡಿರುವ ಐವರು ಆರೋಪಿಗಳಿಗೆ ಶೋಧ ಮುಂದುವರಿದಿದೆ. ಸತತವಾಗಿ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಈ ತಿಂಗಳ 30ರ ಒಳಗೆ ಶರಣಾಗುವಂತೆ ಅಂತಿಮ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಬುಧವಾರ ಧ್ವನಿವರ್ಧಕದ ಮೂಲಕ ಆರೋಪಿಗಳ ಮನೆಯ ಪರಿಸರದಲ್ಲಿ ಎಚ್ಚರಿಕೆ ಮೂಡಿಸುವ ಕಾರ್ಯ ನಡೆದಿದೆ.
ಅಲ್ಲದೆ ಆರೋಪಿಗಳ ಮನೆಗೆ ನೋಟಿಸ್ ಅಂಟಿಸಲಾಗಿದ್ದು, ಇದರಲ್ಲಿ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಕಡಕ್ ಎಚ್ಚರಿಕೆ ನೀಡಲಾಗಿದೆ. ಪ್ರಕರಣದ ಒಟ್ಟು 21 ಆರೋಪಿಗಳ ಪೈಕಿ ಈಗಾಗಲೇ 16 ಮಂದಿಯನ್ನು ಎನ್‌ಐಎ ತಂಡ ಬಂಧಿಸಿದೆ.