March 22, 2026
Sunday, March 22, 2026
spot_img

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ದೆಹಲಿಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮದ್ಯ ಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ದೇಶದಲ್ಲಿ ತೈಲ ಅಭಾವ ಉಂಟಾಗಿದ್ದು, ಈ ಹಿನ್ನೆಲೆ ಪೆಟ್ರೋಲಿಯಂ, ಕಚ್ಚಾ ತೈಲ, ಅನಿಲ, ವಿದ್ಯುತ್‌ ಮತ್ತು ರಸಗೊಬ್ಬರ ವಲಯಗಳ ಪರಿಸ್ಥಿತಿಯನ್ನು ಅರಿಯಲು ಪ್ರಧಾನಿ ಮೋದಿ ಇಂದು ಕ್ಯಾಬಿನೆಟ್ ನ ಹಿರಿಯ ಸಚಿವರ ಜೊತೆ ಸಭೆ ನಡೆಸಿದರು.

ದೆಹಲಿ ಲೋಕಕಲ್ಯಾಣ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅದ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಸಾಯನಿಕ ಮತ್ತು ರಸಗೊಬ್ಬರ ಮತ್ತು ಆರೋಗ್ಯ ಸಚಿವ ಜೆ.ಪಿ ನಡ್ಡಾ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಸಹಿತ ಹಿರಿಯ ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಿದ್ದಾರೆ.

ಸಭೆಯಲ್ಲಿ ಅಧಿಕಾರಿಗಳು ಪ್ರಸ್ತುತ ದೇಶದ ತೈಲದ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದರು. ಸಂಘರ್ಷದ ನಡುವೆಯೂ ದೇಶದಲ್ಲಿ ಜನರಿಗೆ ಯಾವ ರೀತಿ ಇಂಧನ ಪೂರೈಕೆಯಾಗುತ್ತಿದ್ದು, ಸರಕಾರ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮಾತುಕತೆ ನಡೆಯಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !