ಕಾಂಗ್ರೆಸ್-ಬಿಜೆಪಿ ನಡುವೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನೇರಾ ಹಣಾಹಣಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠಿತ ಕ್ಷೇತ್ರವಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಒಟ್ಟು 19,23,788 ಮತದಾರರಿದ್ದಾರೆ. 9,57,559 ಪುರುಷ ಮತದಾರರು , 9,66,134 ಮಹಿಳೆಯರು ಮತ್ತು 95 ಇತರೆ ಮತದಾರರಿದ್ದಾರೆ. ಜಿಲ್ಲೆಯಲ್ಲಿ 53,922 ಯುವ ಮತದಾರರಿದ್ದಾರೆ. ಒಟ್ಟು 7,958 ಸೇವಾ ಮತದಾರರಿದ್ದಾರೆ.

85 ವರ್ಷಕ್ಕಿಂತ ಮೇಲ್ಪಟ್ಟ 20,512 ಜನರು ಇಲ್ಲಿ ವಾಸಿಸುತ್ತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಒಟ್ಟು 2,086 ಮತಗಟ್ಟೆಗಳನ್ನು ಅಳವಡಿಸಲಾಗಿದೆ. 466 ಮತಗಟ್ಟೆಗಳು ಸೂಕ್ಷ್ಮ ಅಥವಾ ಅತಿಸೂಕ್ಷ್ಮ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!