ಹೊಸದಿಗಂತ ವರದಿ ಬೆಳಗಾವಿ:
ಕಬ್ಬು ಬೆಳೆಗಾರರು ಹಾಗೂ ರಾಜ್ಯದ 81 ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸೋಮವಾರ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು.
ಮುಖ್ಯಮಂತ್ರಿಗಳು ಸಭಾಂಗಣಕ್ಕೆ ಆಗಮಿಸುವ ಮುನ್ನವೇ ಸಭೆಯಲ್ಲಿ ಅಸಮಾಧಾನದ ವಾತಾವರಣ ನಿರ್ಮಾಣವಾಯಿತು. ಕಾರ್ಖಾನೆಗಳ ಮಾಲೀಕರು ಸಭಾಂಗಣದಲ್ಲಿ ಆಸೀನರಾಗಿದ್ದ ಸಂದರ್ಭದಲ್ಲಿ, ಸಭೆಗೆ ಸಂಸದರು ಹಾಗೂ ಶಾಸಕರು ಏಕೆ ಆಗಮಿಸಿದ್ದಾರೆ ಅವರನ್ನು ವೇದಿಕೆಯ ಮೇಲೆ ಕೂರಿಸಬೇಕು. ಇಲ್ಲವಾದಲ್ಲಿ ಸಭೆಯನ್ನು ಬಹಿಷ್ಕರಿಸಲಾಗುವುದು ಎಂದು ಕಾರ್ಖಾನೆ ಮಾಲೀಕರ ಪರವಾಗಿ ಕೋರೆ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಈ ವಿಚಾರವಾಗಿ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ವಿಜಯಕುಮಾರ್ ಹೊನಕೇರಿ, ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಸುವರ್ಣ ವಿಧಾನಸೌಧದಲ್ಲಿ ನಡೆಯಿತು. ಕಾರ್ಖಾನೆ ಮಾಲೀಕರ ಸಭೆಯಲ್ಲಿ ಜನಪ್ರತಿನಿಧಿಗಳಿಗೆ ಆಸನ ವ್ಯವಸ್ಥೆ ಕಲ್ಪಿಸುವ ವಿಚಾರವಾಗಿ ಉಂಟಾದ ಈ ಬೆಳವಣಿಗೆ ಕೆಲಕಾಲ ಗೊಂದಲಕ್ಕೆ ಕಾರಣವಾಯಿತು.
ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ಸಕ್ಕರೆ ಕಾರ್ಖಾನೆಗಳ ವಿಚಾರವಾಗಿ ಮಹತ್ವದ ಚರ್ಚೆ ನಡೆಯಬೇಕಿದ್ದ ಸಭೆಯ ಆರಂಭದಲ್ಲೇ ಆಸನ ವ್ಯವಸ್ಥೆ ವಿಚಾರವಾಗಿ ಗೊಂದಲ ಉಂಟಾಯಿತು.



