Friday, September 26, 2025

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದ ಗೊಂದಲಕ್ಕೆ ಬಿತ್ತು ತೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದ ವಿಚಾರವಾಗಿ ಉಂಟಾಗಿದ್ದ ಗೊಂದಲದ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ನಿಗಮದ ಹಾಲಿ ಅಧ್ಯಕ್ಷ ರಾಜು ಕಾಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದು, ನಿಗಮದ ಅಧ್ಯಕ್ಷ ಸ್ಥಾನದಲ್ಲಿ ನಿಮ್ಮನ್ನೇ ಮುಂದುವರಿಸೋದಾಗಿ ಭರವಸೆ ನೀಡಿದ್ದಾರೆ.

ಸರ್ಕಾರಕ್ಕೆ ಮುಜುಗರ ಆಗುವಂತೆ ಹೇಳಿಕೆ ನೀಡಿದ್ದ ಕಾರಣ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಶಾಸಕ ರಾಜು ಕಾಗೆ ಅವರಿಗೆ ಗೇಟ್ಪಾಸ್​ ನೀಡಲಾಗಿದೆ.

ತೆರವಾದ ಹುದ್ದೆಗೆ ಅರುಣ್ ಪಾಟೀಲ್ ನೇಮಕಕ್ಕೆ ಹೈಕಮಾಂಡ್ ನಿರ್ಧರಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲರಿಂದ ಈ ಬಗ್ಗೆ ಪಟ್ಟಿ ಸಿಎಂ ಸಿದ್ದರಾಮಯ್ಯ ಅವರಿಗೆ ರವಾನೆಯಾಗಿದೆ. ಈ ಮೂಲಕ ಸರ್ಕಾರಕ್ಕೆ ಮುಜುಗರ ಉಂಟುಮಾಡುವಂಥ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಪ್ರಬಲ ಸಂದೇಶ ರವಾನಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು.

ಇದನ್ನೂ ಓದಿ