ಹೆಡೆಯೆತ್ತಿದ ಕೋವಿಡ್ ರೂಪಾಂತರಿ: ಸಭೆ, ಪ್ರಯಾಣ ತಪ್ಪಿಸಿ ಎಂದ ಐಎಂಎ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಾಹ ಸಮಾರಂಭ, ರಾಜಕೀಯ, ಸಾಮಾಜಿಕ ಸಭೆ, ಅಂತಾರಾಷ್ಟ್ರೀಯ ಪ್ರಯಾಣಗಳನ್ನು ತಪ್ಪಿಸುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜನರಿಗೆ ಸಲಹೆ ನೀಡಿದೆ.

ಯುನೈಟೆಡ್ ಸ್ಟೇಟ್ಸ್, ಜಪಾನ್, ದಕ್ಷಿಣ ಕೊರಿಯಾ, ಫ್ರಾನ್ಸ್ ಮತ್ತು ಬ್ರೆಜಿಲ್‌ನಂತಹ ದೇಶಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ಸುಮಾರು 5.37 ಲಕ್ಷ ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಡೋಸ್ ತೆಗೆದುಕೊಳ್ಳುವುದು ಸೇರಿದಂತೆ ಸೋಂಕಿನ ವಿರುದ್ಧ ಹೋರಾಡಲು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಐಎಂಎ ಮನವಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!