ಎಬಿವಿಪಿ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ರೋಹಿಣಾಕ್ಷ ಶಿಲಾ೯ಲೂಗೆ ಅಭಿನಂದನೆ

ಹೊಸ ದಿಗಂತ ವರದಿ, ಕಲಬುರಗಿ:

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ರೋಹಿಣಾಕ್ಷ ಶಿರ್ಲಾಲು ರವರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಅಭಿನಂದನೆಗಳು ಎಂದು ಎಬಿವಿಪಿ ಮಹಾನಗರ ಕಾಯ೯ದಶಿ೯ ಶಿವಕುಮಾರ್ ಹರನೂರ ಹಾಗೂ ಬಸವಂತಗೌಡ ಪಾಟೀಲ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ 7 ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ ವಿದ್ಯಾರ್ಥಿ ಶಕ್ತಿ ರಾಷ್ಟ್ರ ಶಕ್ತಿ ಎನ್ನುವ ಘೋಷವಾಕ್ಯದೊಂದಿಗೆ ಅನೇಕ ರಚನಾತ್ಮಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಭಕ್ತಿ ಬೆಳೆಸುವುದರೊಂದಿಗೆ ಸಂಘಟನೆ ಮಾಡಿದ್ದಾರೆ ಎಂದರು.

ವಿದ್ಯಾರ್ಥಿಗಳ ಸರ್ವಾಂಗಿಣ ವಿಕಾಸನಕ್ಕೆ ಕಾರ್ಯನಿರ್ವಹಿಸುತ್ತಿರುವ ಜಗತ್ತಿನ ಅತಿದೊಡ್ಡ ವಿದ್ಯಾರ್ಥಿ ಸಂಘಟನೆಯ ಕರ್ನಾಟಕ ರಾಜ್ಯದ 41ನೇ ರಾಜ್ಯ ಸಮ್ಮೇಳನವನ್ನು ಗಿರಿಕಾನನ ಹೊಂದಿ ಜಾನಪದ ಸೋಗಡಿನ ತವರೂರಾದ ಚಾಮರಾಜನಗರದಲ್ಲಿ ಫೆಬ್ರವರಿ 15 ಮತ್ತು 16 ರಂದು ಯಸಶ್ವಿಯಾಗಿ ಜರುಗಿದ್ದು, ಈ ಸಮ್ಮೆಳನದಲ್ಲಿ 2022-23 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕನಾಟಕ ರಾಜ್ಯದ ರಾಜ್ಯ ಅಧ್ಯಕ್ಷರಾಗಿ ಅಂಕಣಕಾರರು ಹಾಗೂ ಕೇಂದ್ರಿಯ ವಿಶ್ವವಿದ್ಯಾಲಯದ ಪ್ರಾಧ್ಯಪಕರಾದ ಡಾ. ರೀಹಿಣಾಕ್ಷ ಶಿರ್ಲಾಲು ರವರು ಅವಿರೋಧವಾಗಿ ಆಯ್ಕೆ ಆಗಿರುವುದು ಸಂತೋಷಕರವಾಗಿದೆ ಎಂದು ತಿಳಿಸಿದ್ದಾರೆ.

ಕಲಬುರಗಿ ಭಾಗದಿಂದ ಗುರುತಿಸಿ ರಾಜ್ಯ ಮಟ್ಟದ ಜವಾಬ್ದಾರಿ ನೀಡಿ ರಾಷ್ಟ್ರ ಕಾರ್ಯದಲ್ಲಿ ಹೆಚ್ಚಿನ ಕೆಲಸ ನಿರ್ವಹಿಸಲಿ ಎಂದು ಕಲಬುರಗಿ ಮಹಾನಗರದ ಎಲ್ಲಾ ಕಾರ್ಯಕರ್ತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!