ನೂತನ ಅಧ್ಯಕ್ಷರಿಗೆ ಅಭಿನಂದನೆ, ಶ್ರೀಲಂಕಾದ ಜನತೆಗೆ ಸಂಪೂರ್ಣ ಬೆಂಬಲ ನೀಡುವೆ ಎಂದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಶ್ರೀಲಂಕಾ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರನಿಲ್ ವಿಕ್ರಮಸಿಂಘೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಶ್ರೀಲಂಕಾದ ಜನತೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.
ಶ್ರೀಲಂಕಾಕ್ಕೆ ನಿರ್ಣಾಯಕ ಸಮಯದಲ್ಲಿ ನೀವು ಉನ್ನತ ಹುದ್ದೆಯನ್ನು ಅಲಂಕರಿಸಿದ್ದೀರಿ. ನಿಮ್ಮ ಅಧಿಕಾರವಧಿ ಆರ್ಥಿಕ ಸ್ಥಿರತೆಯನ್ನ ಪೋಷಿಸುತ್ತದೆ ಮತ್ತು ಶ್ರೀಲಂಕಾದ ಎಲ್ಲಾ ನಾಗರಿಕರ ಆಕಾಂಕ್ಷೆಗಳನ್ನು ಪೂರೈಸುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ದ ಪತ್ರದಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.
‘ಸ್ಥಾಪಿತ ಪ್ರಜಾಸತ್ತಾತ್ಮಕ ವಿಧಾನಗಳು, ಸಂಸ್ಥೆಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಮೂಲಕ ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗಾಗಿ ಶ್ರೀಲಂಕಾದ ಜನರ ಅನ್ವೇಷಣೆಗೆ ಭಾರತವು ಬೆಂಬಲ ನೀಡುವುದನ್ನು ಮುಂದುವರಿಸುತ್ತದೆ’ ಎಂದು ಪತ್ರದಲ್ಲಿ ಪ್ರಧಾನಮಂತ್ರಿ ಪುನರುಚ್ಚರಿಸಿದರು.
‘ಜನರ ಪರಸ್ಪರ ಪ್ರಯೋಜನಕ್ಕಾಗಿ ಭಾರತ ಮತ್ತು ಶ್ರೀಲಂಕಾ ನಡುವಿನ ಹಳೆಯ, ನಿಕಟ ಮತ್ತು ಸ್ನೇಹಪರ ಸಂಬಂಧಗಳನ್ನ ಬಲಪಡಿಸಲು ಗೌರವಾನ್ವಿತ ರನಿಲ್ ವಿಕ್ರಮಸಿಂಘೆ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ತಾವು ಎದುರು ನೋಡುತ್ತಿರುವುದಾಗಿ ಪ್ರಧಾನಿ ಮೋದಿ ಅವರಿಗೆ ತಿಳಿಸಲಾಗಿದೆ’ ಎಂದು ಶ್ರೀಲಂಕಾದಲ್ಲಿರುವ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!