ಹೊಸದಿಗಂತ ಆನ್ ಲೈನ್ ಡೆಸ್ಕ್:
ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಪ್ರಧಾನಿ ಮೋದಿ ಅವರನ್ನು ಹೊಗಳಿದ್ದಕ್ಕೆ ಆಕ್ರೋಶಗೊಂಡ ಕಾಶ್ಮೀರ ಶ್ರೀನಗರದ ಕಾಂಗ್ರೆಸ್ ಕಾರ್ಯಕರ್ತರು ಆಜಾದ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಅವರ ಪ್ರತಿಕೃತಿ ದಹಿಸಿದ್ದಾರೆ.
ಕಾಂಗ್ರೆಸ್ ಆಜಾದ್ ಅವರನ್ನು ಅತ್ಯಂತ ಗೌರವದಿಂದ ನೋಡಿದೆ. ಆದರೆ ಅವರು ಬಿಜೆಪಿಯೊಂದಿಗೆ ಸ್ನೇಹವನ್ನು ರೂಪಿಸಿಕೊಂಡರು. ಅವರು ಡಿಡಿಸಿ ಚುನಾವಣಾ ಪ್ರಚಾರಕ್ಕಾಗಿ ಬರಲಿಲ್ಲ. ಪ್ರಧಾನ ಮಂತ್ರಿಯನ್ನು ಹೊಗಳಿದ್ದಾರೆಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ