spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಶತಸಿದ್ಧ: ಮಾಜಿ ಸಚಿವ ಶರಣಪ್ರಕಾಶ ಪಾಟೀಲ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ ಮಹಾ ನಗರ ಪಾಲಿಕೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ರಚನೆಯಾಗುವುದು ನೂರಕ್ಕೆ ನೂರರಷ್ಟು ಖಚಿತವೆಂದು ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖಗೆ೯ ಅವರು ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಹಾಗೂ ಜೆಡಿಎಸ್ ಪಕ್ಷ ಮೈತ್ರಿ ಯಾಗುವುದು ಶತಸಿದ್ಧವೆಂದು ನುಡಿದರು.

ಕಾಂಗ್ರೆಸ್ ಪಕ್ಷ ಜೆಡಿಎಸ್ ಪಕ್ಷವನ್ನು ಸವ೯ನಾಶ ಮಾಡಲು ಕುತಂತ್ರ ಮಾಡುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ,ಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷ ಯಾವತ್ತೂ ಜೆಡಿಎಸ್ ಪಕ್ಷವನ್ನು ಮುಗಿಸಲು ಯತ್ನಿಸಿಲ್ಲ ಎಂದರು.

ಬಿಜೆಪಿ ಪಕ್ಷ, ಜೆಡಿಎಸ್ ಪಕ್ಷವನ್ನು ಸವ೯ನಾಶ ಮಾಡಲು ಹೊರಟಿದೆ ಎಂದರು.ಕುಮಾರಸ್ವಾಮಿ ಮುಖ್ಯಮಂತ್ರಿ ಇದ್ದಾಗ, ಕೇಂದ್ರದ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಎಚ್.ಡಿ.ಕೆ.ಅವರನ್ನು ಕೆಳಗೆ ಇಳಿಸಿದ್ದು ಯಾರು ? ಎಂದು ಪ್ರಶ್ನಿಸಿದರು.

ಇದೀಗ ಮತ್ತೆ ಬಿಜೆಪಿ ಜೆಡಿಎಸ್ ಪಕ್ಷದ ಮನೆ ಬಾಗಿಲಿಗೆ ಹೋಗಿದ್ದು,ವಿಪರ್ಯಾಸ, ದ ಸಂಗತಿ ಎಂದರು. ನಿನ್ನೆ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಮೈತ್ರಿ ಬಗ್ಗೆ ಯಾವುದೇ ನಿಧಾ೯ರ ತೆಗೆದುಕೊಂಡಿಲ್ಲ, ಆದರೆ ಜೆಡಿಎಸ್ ಪಕ್ಷ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಮೇಯರ್ ಚುನಾವಣೆ ಯನ್ನು ಮುಂದೂಡುವ ಹುನ್ನಾರ ನಡೆಸುತ್ತಿದೆ. ಒಂದು ವೇಳೆ ಮೇಯರ್ ಚುನಾವಣೆ ಮುಂದುಡಿದರೇ, ನಾವು ಕೋಟ೯ ಮೊರೆ ಹೋಗುತ್ತೇವೆ ಎಂದರು.

ಈ ಹಿಂದೆ ಪಾಲಿಕೆ ಚುನಾವಣೆ ಮುಂದುಡಿತ್ತು. ಆದರೆ ಕೋಟ್೯ ಚುನಾವಣಾ ನಡೆಸಿ ಎಂದು ಆದೇಶ ಹೊರಡಿಸಿತ್ತು ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಇನ್ನೂಅಧಿಕಾರದ ಆಸೆಗಾಗಿ ಬಿಜೆಪಿ ಪಕ್ಷ ಜೆಡಿಎಸ್ ಸದಸ್ಯರಿಗೆ ಹಣದ ಆಮಿಶ್ ಒಡ್ಡಿ, ಅವರನ್ನು ಹೆದರಿಸುವ,ಬೆದರಿಸುವ ಕಾಯ೯ವನ್ನು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss