ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸ್ಪಷ್ಟ ಬಹುಮತ ಬರಲಿದೆ ಎಂದು ಬಹುತೇಕ ಎಲ್ಲಾ ಎಕ್ಸಿಟ್ ಪೋಲ್‌ಗಳು ಹೇಳುತ್ತಿದೆ .
ಆದ್ರೆ ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಹಾರದಲ್ಲಿ ಎಕ್ಸಿಟ್ ಪೋಲ್ ಬಿಜೆಪಿಗೆ ಗೆಲುವು ಎಂದಿದೆ. ಆದರೆ ಈ ಹಿಂದೆ ಹರ್ಯಾಣದಲ್ಲಿ ಎಕ್ಸಿಟ್ ಪೋಲ್ ಕಾಂಗ್ರೆಸ್‌ಗೆ ಗೆಲುವು ಎಂದಿದೆ. ಆದರೆ ಅಲ್ಲಿ ಬಿಜೆಪಿ ಗೆದ್ದಿತ್ತು. ಇದೀಗ ಬಿಹಾರದಲ್ಲೂ ಅದೇ ರೀತಿ ಉಲ್ಟಾ ಆಗಲಿದೆ. ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.
ಎಕ್ಸಿಟ್ ಪೋಲ್‌ಗಳೆಲ್ಲಾ ಎನ್‌ಡಿಎಗೆ ಮುನ್ನಡೆ ತೋರಿಸುತ್ತಿದೆ. ಅಷ್ಟು ಮಹಾಘಟಬಂದನ್ ಗೆ ಪ್ರೋತ್ಸಾಹ ಇಲ್ಲ ಎಂದು ತೋರಿಸುತ್ತಿದೆ. ಇದೇ ರೀತಿಯಾಗಿ ಹರಿಯಾಣದಲ್ಲಿ ಎಕ್ಸಿಟ್ ಪೋಲ್ ಎಲ್ಲ ಕಾಂಗ್ರೆಸ್ ಗೆ ಬರುತ್ತದೆ ಎಂದು ತೋರಿಸಿದ್ದರು. ಆದರೆ ರಿಸಲ್ಟ್ ಉಲ್ಟಾ ಆಗಿ ಬಿಜೆಪಿ ಬಂತು. ರಿಸಲ್ಟ್ ಬರುವ ತನಕ ಇದನ್ನೂ ಕಾದು ನೋಡೋಣ ಎಂದು ಖರ್ಗೆ ಹೇಳಿದ್ದಾರೆ.

