5ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಮಹಿಳೆಯರಿಗೆ ಸಾರಿಗೆ ಬಸ್ ಪ್ರಯಾಣ ಉಚಿತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ 

ರಾಜ್ಯ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ರಣತಂತ್ರ ರೂಪಿಸುತ್ತಿದ್ದು, ಈಗಾಗಲೇ ೪ ಗ್ಯಾರಂಟಿ ಘೋಷಿಸಿದ ಪಕ್ಷ ಇದೀಗ ದನೇ ಗ್ಯಾರಂಟಿ ಘೋಷಿಸಿದೆ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸುವುದೇ ಕಾಂಗ್ರೆಸ್‌ನ ಐದನೇ ಗ್ಯಾರಂಟಿಯಾಗಿದೆ.

ಮಂಗಳೂರು ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಅವರು ರಾಹುಲ್ ಗಾಂಧಿ, ಕಾಂಗ್ರೆಸ್‌ನ ಐದನೇ ಗ್ಯಾರಂಟಿಯನ್ನು ಘೋಷಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದಾಗಿದೆ’ ಎಂದು ರಾಹುಲ್‌ ಗಾಂಧಿ ಹೇಳಿದರು. ಇದುವರೆಗೆ ಕಾಂಗ್ರೆಸ್‌ ನಾಲ್ಕು ಗ್ಯಾರಂಟಿಗಳನ್ನು ನೀಡಲಾಗಿತ್ತು. ಈಗ ಐದನೇ ಗ್ಯಾರಂಟಿಯನ್ನು ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!