ಮಧ್ಯಪ್ರದೇಶ ರಾಜ್ಯಾಧ್ಯಕ್ಷರನ್ನು ನೇಮಿಸಿದ ಕಾಂಗ್ರೆಸ್: ಜಿತು ಪಟ್ವಾರಿಗೆ ಪಕ್ಷದ ಸಾರಥ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಒಬಿಸಿ ನಾಯಕ ಜಿತು ಪಟ್ವಾರಿ ನೇಮಕ ಮಾಡಲಾಗಿದೆ.
ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಕಮಲ್ ನಾಥ್ ಅವರು ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಮಲ್‌ನಾಥ್ ಸರ್ಕಾರದಲ್ಲಿ ಉನ್ನತ ಶಿಕ್ಷಣ, ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವರಾಗಿದ್ದ ಪಟ್ವಾರಿ ಅವರು ಮಾಲ್ವಾ-ನಿಮಾರ್ ಪ್ರದೇಶದಿಂದ ಬಂದವರು. ಇದೇ ಸಂದರ್ಭ ಬುಡಕಟ್ಟು ಜನಾಂಗದ ನಾಯಕ ಉಮೇಶ್ ಸಿಂಘಾರ್ ಅವರನ್ನು ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಕಾಂಗ್ರೆಸ್ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!