ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನಲ್ಲಿ ಆಪರೇಷನ್ ಸಿಂದೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಲು ಕಾಂಗ್ರೆಸ್ ಸೂಚಿಸಿತ್ತು. ಆದರೆ, ಅವರು ಅದಕ್ಕೆ ಒಪ್ಪಿಲ್ಲ ಎಂದು ಮೂಲಗಳು ತಿಳಿಸಿವೆ.
ಆಪರೇಷನ್ ಸಿಂದೂರ್ ಬಗ್ಗೆ ಟೀಕಿಸಲು ಲೋಕಸಭಾ ಚರ್ಚೆಯಲ್ಲಿ ಭಾಗವಹಿಸಲು ಪಕ್ಷದ ನಾಯಕತ್ವ ನೀಡಿದ ಸೂಚನೆಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಲೋಕಸಭೆಯ ಚರ್ಚೆಯಲ್ಲಿ ಭಾಗವಹಿಸಲು ಪಕ್ಷದ ನಾಯಕರು ಶಶಿ ತರೂರ್ ಅವರನ್ನು ಸಂಪರ್ಕಿಸಿದ್ದರು. ಆದರೆ, ಈ ಕಾರ್ಯಾಚರಣೆಯ ಕುರಿತು ಸರ್ಕಾರವನ್ನು ಟೀಕಿಸುವ ಪಕ್ಷದ ನಿಲುವಿಗೆ ಬದ್ಧರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಭಯೋತ್ಪಾದಕ ದಾಳಿಯ ನಂತರ ಸರ್ಕಾರದ ಕ್ರಮವನ್ನು ಅತ್ಯಂತ ಉತ್ಸಾಹದಿಂದ ಬೆಂಬಲಿಸಿ ಪಕ್ಷದೊಂದಿಗಿನ ಸಂಬಂಧ ಹದಗೆಡಿಸಿಕೊಂಡಿದ್ದ ಶಶಿ ತರೂರ್ ಅವರು, ಅಮೆರಿಕ ಸೇರಿದಂತೆ ಇತರ ದೇಶಗಳಿಗೆ ಸರ್ಕಾರ ಕಳುಹಿಸಿದ್ದ ಸರ್ವಪಕ್ಷ ಸಂಸದರ ನಿಯೋಗದ ನೇತೃತ್ವ ವಹಿಸಿಕೊಂಡಿದ್ದರು.
ಚರ್ಚೆಯ ಸಮಯದಲ್ಲಿ ತರೂರ್ ಅವರನ್ನು ಮಾತನಾಡಲು ಕೇಳಲಾಗಿದೆಯೇ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಹಿರಿಯ ಕಾಂಗ್ರೆಸ್ ನಾಯಕರೊಯೊಬ್ಬರು, “ಹಿರಿಯ ನಾಯಕರಿಗೆ ಪ್ರಮುಖ ವಿಷಯದ ಕುರಿತು ಮಾತನಾಡಲು ಆಸಕ್ತಿ ಇದೆಯೇ ಎಂದು ಕೇಳುವುದು ವಾಡಿಕೆ. ಗೌರವ್ ಗೊಗೊಯ್ ಮತ್ತು ಕೆ ಸುರೇಶ್ ಅವರು ಮಾತನಾಡುವುದಾಗಿ ಹೇಳಿದ್ದಾರೆ. ಆದರೆ ಶಶಿ ತರೂರ್ ಅವರು ಆಪರೇಷನ್ ಸಿಂದೂರ್ ಬಗ್ಗೆ ಆಸಕ್ತಿ ಇಲ್ಲ. ಬಂದರು ಮಸೂದೆಯ ಕುರಿತು ಮಾತನಾಡುವುದಾಗಿ ಹೇಳಿದ್ದಾರೆ ಎಂದರು.