ಗಲಭೆ ಸೃಷ್ಟಿಸುವ ಮೂಲಕ ಎರಡು ಗುಂಪುಗಳ ನಡುವಿನ ಜಗಳಕ್ಕೆ ಕಾಂಗ್ರೆಸ್ ಯತ್ನ: ಸಚಿವ ಬಿ.ಶ್ರೀರಾಮುಲು

ಹೊಸದಿಗಂತ ವರದಿ,ಕಲಬುರಗಿ:

ರಾಜ್ಯದಲ್ಲಿ ಹಿಂದೂ ಮುಸ್ಲಿಂ ನಡುವೆ ಜಗಳ ಹಚ್ಚಿ,ಗಲಭೆ ಸೃಷ್ಟಿ ಮಾಡುವಂತಹ ಕಾಯ೯ಕ್ಕೆ ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಅವರು ನಗರದ ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಕಲಬುರಗಿ ವಿಭಾಗ ಮಟ್ಟದ ಕಾಯ೯ಕತ೯ರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸದ್ಯವಾಗಿದ್ದು,ಅದೇ ದಾರಿಯಲ್ಲಿ ಈ ಭಾಗದ ಅಭಿವೃದ್ಧಿ ಕಾರ್ಯ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಪ್ರಾರಂಭವಾಗಿ ಇಂದು ಬಸವರಾಜ ಬೊಮ್ಮಾಯಿ ವರೆಗೆ ಬಂದಿದೆ ಎಂದರು.

ಕಲಬುರಗಿ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಸೇರಿ ಇನ್ನಿತರ ಅಭಿವೃದ್ಧಿ ಕೆಲಸಗಳೇ ಇದಕ್ಕೆ ಸಾಕ್ಷಿಯಾಗಿವೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ವಿಷಯ ತಿಳಿದು ಕಾಂಗ್ರೆಸ್ ಪಕ್ಷ ನಾಟಕವಾಡುತ್ತಿದೆ ಎಂದರು.

ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ, ಹುಬ್ಬಳ್ಳಿ ಗಲಭೆ ಗಳಂತೆ ಈ ಭಾಗದಲ್ಲಿಯೂ ಗಲಭೆ ಸೃಷ್ಟಿಸುವ ಮೂಲಕ ಹಿಂದೂ ಮುಸ್ಲಿಂ ನಡುವೆ ಜಗಳ ಹಚ್ಚುವ ಕೆಲಸ ಮಾಡುವ ಪ್ರಯತ್ನ ಮಾಡುತ್ತಿದೆ. ಆ ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಹಾಗೂ 150 ಸ್ಥಾನ ಗೆಲ್ಲಲು ಕಾರ್ಯಕರ್ತರು ದಿನದ 24 ತಾಸು ಕೆಲಸ ಮಾಡಬೇಕು. ಕಲ್ಯಾಣ ಕರ್ನಾಟಕದಿಂದ ಹೆಚ್ಚಿನ ಶಾಸಕರನ್ನು ಆಯ್ಕೆ ಮಾಡಬೇಕೆಂದು ಕಾಯ೯ಕತ೯ರಿಗೆ ಕಿವಿಮಾತು ಹೇಳಿದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!