ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ ಆರಂಭಿಸಲು ಮುಂದಾಗಿದ್ದಾರೆ.
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಏ.2ರಂದು ಉಪವಾಸ ಸತ್ಯಾಗ್ರಹ ನಡೆಸಲು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ನಿರ್ಧರಿಸಿದ್ದಾರೆ. ಮಂಗಳವಾರ 10:30 ರಿಂದ ಸಂಜೆ 5 ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದು. ಇದು ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸುತ್ತದೆ. ಇದನ್ನು ವಿರೋಧಿಸಿ ಕಿಮ್ಮನೆ ರತ್ನಾಕರ್ ಅವರು ಮೋದಿ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ ಅಷ್ಟೇ ಅಲ್ಲದೆ ಜನರು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.