Friday, December 9, 2022

Latest Posts

ಕರ್ನಾಟಕದಲ್ಲಿ ಭಾರತ್ ಜೋಡೋ: ಯಾತ್ರೆಯಲ್ಲಿ ಪಾಲ್ಗೊಂಡ ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇನ್ನೇನು ಕೆಲವೇ ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ರಂಗು ಪಡೆದಿದೆ. ಇಂದು (ಗುರುವಾರ) ಕರ್ನಾಟಕದಲ್ಲಿ ಯಾತ್ರೆ ಪುನರಾರಂಭವಾಗಿದೆ. ಮೈಸೂರು ದಸರಾ ನಿಮಿತ್ತ ಮಂಗಳವಾರ ಮತ್ತು ಬುಧವಾರ ಪಾದಯಾತ್ರೆಗೆ ವಿರಾಮ ನೀಡಿದ್ದ ರಾಹುಲ್‌ ಗಾಂಧಿ, ಗುರುವಾರ ಬೆಳಗ್ಗೆ 6.30ಕ್ಕೆ ಮಂಡ್ಯದ ಪಾಂಡವಪುರ ತಾಲೂಕಿನ ಬೆಳ್ಳಾಳೆ ಗ್ರಾಮದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಈ ಯಾತ್ರೆಗೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡಾ ಪಾಲ್ಗೊಂಡಿದ್ದಾರೆ.

ಬೆಳಗ್ಗೆ 11 ಗಂಟೆ ವೇಳೆಗೆ ಯಾತ್ರೆ ನಾಗಮಂಗಲ ತಾಲೂಕು ಚೌಡೇನಹಳ್ಳಿ ಗೇಟ್ ತಲುಪಲಿದೆ. ಸಂಜೆ 4:30ಕ್ಕೆ ಯಾತ್ರೆ ಪುನರಾರಂಭವಾಗಲಿದ್ದು, 7 ಗಂಟೆಗೆ ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಸಮಾವೇಶ ಉದ್ದೇಶಿಸಿ ರಾಹುಲ್ ಮಾತನಾಡಲಿದ್ದಾರೆ. ರಾತ್ರಿ ನಾಗಮಂಗಲ ತಾಲೂಕು ಸರಕಾರಿ ಆಯುರ್ವೇದಿಕ್ ಆಸ್ಪತ್ರೆ ಎದುರಿನ ಮಡಕೆ ಹೊಸೂರು ಗೇಟ್ ನಲ್ಲಿ ರಾಹುಲ್ ಹಾಗೂ ತಂಡ ವಾಸ್ತವ್ಯ ಹೂಡಲಿದ್ದಾರೆ.

ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ರಾಹುಲ್ ಜೊತೆ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಸೋಮವಾರವೇ ರಾಜ್ಯಕ್ಕಾಗಮಿಸಿದ ಸೋನಿಯಾ ಗಾಂಧಿ ಎರಡು ದಿನ ಕೊಡುಗು ಜಿಲ್ಲೆಯ ರೆಸಾರ್ಟ್‌ನಲ್ಲಿ ತಂಗಿದ್ದರು. ಮುಂದಿನ ವರ್ಷ ರಾಜ್ಯದಲ್ಲಿ ನಡೆಯುವ ಚುನಾವಣೆ ಕಾಂಗ್ರೆಸ್‌ ಪಾದಯಾತ್ರೆ ನಿರ್ಣಾಯಕವಾಗಿದೆ. ನಾಳೆ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!