ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಭಾರತ್ ನ್ಯಾಯ್ ಜೋಡೋ ಯಾತ್ರೆಗೆ ಇಂದು ಅದ್ಧೂರಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಚಾಲನೆ ನೀಡಿದರು.
ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಲ್ಲಿ ಇಂದು ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಿದರು.
ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದ ತೌಬಲ್ ಜಿಲ್ಲೆಯಿಂದ ಇಂದಿನಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಆರಂಭಗೊಳ್ಳಲಿದೆ.
ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಿಂದ ಆರಂಭಗೊಂಡಿರುವಂತ ಯಾತ್ರೆ, 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿಯನ್ನು ನಡೆಸಲಿದೆ.ಈ ಯಾತ್ರೆಯು 110 ಜಿಲ್ಲೆಗಳ ಮೂಲಕ 67 ದಿನಗಳಲ್ಲಿ 6,700 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ.