ಮಂಡ್ಯದಲ್ಲಿಂದು ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಸಮಾವೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತೆ ಎಲ್ಲ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ. ಇಂದು ಸಕ್ಕರೆ ನಾಡು ಮಂಡ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌-ಬಿಜೆಪಿ ಸಮಾವೇಶ ನಡೆಯಲಿದೆ.

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮಣಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ  ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಗೆಲ್ಲಿಸುವ ಮೂಲಕ‌ ಹೆಚ್‌ಡಿಕೆಯನ್ನು ಸೋಲಿಸಬೇಕೆಂದು ನಾಯಕರು ಮುಂದಾಗಿದ್ದಾರೆ. ಈ

ಇಂದು ಸ್ಟಾರ್ ಚಂದ್ರು ಪರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮೊದಲಿಗೆ ಕೆ.ಆರ್.ನಗರ, ನಂತರ ಕೆ‌‌.ಆರ್.ಪೇಟೆ‌ ಹಾಗೂ ಅಂತಿಮವಾಗಿ ನಾಗಮಂಗಲದಲ್ಲಿ ಪ್ರಚಾರ ಸಭೆ ಜರುಗಲಿದೆ. ಪ್ರತಿ ಸಮಾವೇಶದಲ್ಲೂ‌ 50 ಸಾವಿರ ಜನರನ್ನು ಸೇರಿಸುವ ನೀರಿಕ್ಷೆಯಲ್ಲಿ ಕೈ ನಾಯಕರು ಇದ್ದಾರೆ. ಈ ವೇಳೆ ಸಿದ್ದರಾಮಯ್ಯ, ಡಿಕೆಶಿ ಹಾಗೂ ಚಲುವರಾಯಸ್ವಾಮಿ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಲಿದ್ದಾರೆ.

ಒಂದು ಕಡೆ ಕಾಂಗ್ರೆಸ್ ನಾಯಕರು ಮಂಡ್ಯ ಲೋಕಸಭಾ ಕ್ಷೇತ್ರದ ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಮಾಡಿದ್ರೆ ಬಿಜೆಪಿ-ಜೆಡಿಎಸ್ ಸಹ ಪ್ರಚಾರ ಸಭೆ ನಡೆಸಲು ಮುಂದಾಗಿದೆ. ತಂದೆ ಕುಮಾರಸ್ವಾಮಿ ಪರ ನಿಖಿಲ್ ಇಂದು ಬೆಳಗ್ಗೆಯಿಂದಲೇ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!