ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್ ಸರ್ವನಾಶ: ಜಗದೀಶ್ ಶೆಟ್ಟರ್

ಹೊಸ ದಿಗಂತ ವರದಿ, ಮೈಸೂರು:

ವಿಪಕ್ಷ ನಾಯಕ ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಬುಧವಾರ ಸಂಜೆ ನಗರದ ವಸ್ತುಪ್ರದರ್ಶನ ಪ್ರಾಧಿಕಾರದಲ್ಲಿರುವ ಕಾಳಿಂಗರಾವ್ ಮಂಟಪದಲ್ಲಿ ನಡೆದ ಮೈಸೂರು ವಿಭಾಗ ಮಟ್ಟ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಂಜಾಬ್‌ನಲ್ಲಿ ನವಜೋತ್ ಸಿಂಗ್ ಸಿದ್ದು ಅಲ್ಲಿನ ಕಾಂಗ್ರೆಸ್‌ನ್ನು ನಾಶ ಮಾಡಿದರು. ಅದೇ ರೀತಿ ನಮ್ಮ ರಾಜ್ಯದಲ್ಲೂ ಸಿದ್ದರಾಮಯ್ಯ ಕಾಂಗ್ರೆಸ್‌ನ್ನು ನಾಶ ಮಾಡಲಿದ್ದಾರೆ. ಇನ್ನು ಮರ‍್ನಾಲ್ಕು ತಿಂಗಳಲ್ಲೇ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಆಂತರಿಕ ಕಲಹ ಮತ್ತುಷ್ಟು ಸ್ಪೋಟಗೊಳ್ಳಲಿದೆ. ಇದರಿಂದಾಗಿ ಕಾಂಗ್ರೆಸ್ ಮತ್ತಷ್ಟು ಹಾಳಾಗಲಿದೆ. ಕಾಂಗ್ರೆಸ್‌ನವರು ನಿರುದ್ಯೋಗಿಗಳಾಗಲಿದ್ದಾರೆ ಎಂದರು.
ಬರುವ ವಿಧಾನಸಭೆಯಲ್ಲಿ ನಾವು ಕಾಂಗ್ರೆಸ್‌ನವರಿಗೆ ಹೆದರಬೇಕಾಗಿಲ್ಲ, ಇನ್ನೂ ಜೆಡಿಎಸ್ ಸ್ಥಿತಿ ಹೇಳಲಾಗುತ್ತಿಲ್ಲ, ಹಾಗಾಗಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ, ಮತ್ತೆ ಅಧಿಕಾರಕ್ಕೆ ಬರಬೇಕಾಗಿದೆ. ಇದಕ್ಕಾಗಿ ಮೈಸೂರು ಭಾಗದಿಂದ ಅತಿ ಹೆಚ್ಚಿನ ಸ್ಥಾನಗಳನ್ನು ಕಾರ್ಯಕರ್ತರು ಹಾಗೂ ಮುಖಂಡರು ಗೆಲ್ಲಿಸಿಕೊಡಬೇಕಾಗಿದ್ದು, ಇದಕ್ಕಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಬಲಾಡ್ಯ ನಾಯಕತ್ವವಿದೆ. ಕಳೆದ 7 ವರ್ಷದಿಂದ ಭ್ರಷ್ಟಾಚಾರ ರಹಿತ, ಕಳಂಕ ರಹಿತ ಆಡಳಿತವನ್ನು ಮೋದಿಯವರು ನೀಡಿದ್ದಾರೆ. ಬಡವರು, ಮಧ್ಯಮ ವರ್ಗ, ರೈತರಿಗೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಅದನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು.
ಇಡೀ ಜಗತ್ತು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಒಪ್ಪಿಕೊಂಡಿದೆ. ಉಕ್ರೇನ್- ರಷ್ಯಾ ನಡುವಿನ ಯುದ್ಧದಲ್ಲಿ ಭಾರತ ತಟಸ್ಥ ನೀತಿಯನ್ನು ಅನುರಿಸುತ್ತಿದೆ. ಅಲ್ಲದೇ ಸಂಕಷ್ಟದ ಸ್ಥಿತಿಯಲ್ಲಿರುವ ರಾಷ್ಟçಗಳಿಗೆ ನೆರವಿನ ಹಸ್ತವನ್ನು ಚಾಚುತ್ತಿದೆ. ಭಾರತದ ಶಕ್ತಿ ಇಮ್ಮಡಿಗೊಳ್ಳುತ್ತಿದೆ ಎಂದು ನುಡಿದರು.
ಬಿಜೆಪಿ ಇಡೀ ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷವಾಗಿದೆ. 19 ಕೋಟಿ ಸದಸ್ಯರಿದ್ದಾರೆ. ಅಲ್ಲದೆ ಅತಿ ಹೆಚ್ಚಿನ ಸಂಸದರು, ಶಾಸಕರನ್ನು ಪಕ್ಷ ಹೊಂದಿದೆ. ಹಾಗಾಗಿ ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಸಂಘಟನೆ ಮಾಡಿ ಕಟ್ಟಿ ಬೆಳೆಸಬೇಕಾಗಿದೆ. ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರುಗಳಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್, ಸಿದ್ದರಾಜು, ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್‌ಕುಮಾರ್, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಎಲ್.ಆರ್.ಮಹದೇವಸ್ವಾಮಿ, ಎನ್.ವಿ.ಫಣೀಶ್, ಎಸ್.ಮಹದೇವಯ್ಯ, ಎ.ಹೇಮಂತ್ ಕುಮಾರ್ ಗೌಡ, ಕಾ.ಪು.ಸಿದ್ಧಲಿಂಗ ಸ್ವಾಮಿ, ಕೃಷ್ಣಪ್ಪಗೌಡ, ಬಿಜೆಪಿ ಮೈಸೂರು ನಗರಾಧ್ಯಕ್ಷ ಟಿ.ಎಸ್.ಶ್ರೀ ವತ್ಸ, ಗ್ರಾಮಾಂತರ ಅಧ್ಯಕ್ಷೆ ಮಂಗಳ ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಹೆಚ್.ಜಿ.ಗಿರಿಧರ್, ಸೋಮಸುಂದರ, ವಾಣೀಶ್, ರಾಜ್ಯ ಉಪಾಧ್ಯಕ್ಷ ಎಂ.ರಾಜೇAದ್ರ, ಪ್ರಮುಖ ವಕ್ತಾರ ಎಂ.ಜಿ.ಮಹೇಶ್, ಜಿಲ್ಲಾ ಮಾಧ್ಯಮ ಪ್ರಮುಖ ರಾದ ರಾಜಕುಮಾರ್, ಮಹೇಶ್ ರಾಜೇ ಅರಸ್, ಕೇಬಲ್ ಮಹೇಶ್, ಪ್ರದೀಪ್ ಕುಮಾರ್, ಕೌಟಿಲ್ಯ ಆರ್.ರಘು, ಶಾಸಕ ಹರ್ಷವರ್ಧನ್, ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!