Sunday, June 26, 2022

Latest Posts

ಕಾಂಗ್ರೆಸ್ ತೆಕ್ಕೆಗೆ ‘ಮಸ್ಕಿ’: ಗೆಲುವು ಸಾಧಿಸಿದ ಬಸನಗೌಡ ತುರವಿಹಾಳ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಅವರು 30 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರು ಸೋಲುಂಡಿದ್ದಾರೆ.
ಮಸ್ಕಿ ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಸವನಗೌಡ ತುರವಿಹಾಳ ಅವರಿಗೆ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಅಭಿನಂದನೆಗಳು ತಿಳಿಸಿದ್ದಾರೆ.
ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು. ತುರುವಿಹಾಳ ಅವರಿಗೆ ಆಶೀರ್ವಾದ ಮಾಡಿದ ಕ್ಷೇತ್ರದ ಮತದಾರರಿಗೆ ಹೃದಯಪೂರ್ವಕ ಕೃತಜ್ಞತೆ ಗಳನ್ನು ಸಲ್ಲಿಸುತ್ತೇನೆ ಎಂದರು.
ಮಸ್ಕಿಯಲ್ಲಿ ಬಸನಗೌಡ ತುರುವಿಹಾಳ ಗೆಲುವಿಗೆ ಶ್ರಮಿಸಿದ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕೊರೊನಾದಿಂದಾಗಿ ದೇಶ ಹಾಗೂ ರಾಜ್ಯ ಸೂತಕದ ಮನೆಯಾಗಿರುವುದರಿಂದ ಪಕ್ಷದ ಕಾರ್ಯರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕೆಂದು‌ ಮನವಿ‌‌ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss