ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ನವಾಗರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರು ರುದ್ರಕುಮಾರ್, ಬೆಂಗಾವಲು ವಾಹನದ ಮೇಲೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಿರುವ ಘಟನೆ ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ.
ಝಾಲ್ ಗ್ರಾಮದಿಂದ ಚುನಾವಣಾ ಪ್ರಚಾರ ಮುಗಿಸಿ ಬುಧವಾರ ತಡರಾತ್ರಿ ಹಿಂದಿರುಗುತ್ತಿದ್ದ ವೇಳೆ ಕೆಲವು ಕಿಡಿಗೇಡಿಗಳು ರುದ್ರಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು, ವಾಹನದ ಗಾಜು ಪುಡಿಪುಡಿಯಾಗಿದೆ.
ಈ ಬಗ್ಗೆ ಪೊಲೀಸರಿಂದ ಹೆಚ್ಚಿನ ತನಿಖೆ ನಡೆಯುತ್ತಿದೆ.
ಛತ್ತೀಸ್‌ಗಢ ವಿಧಾನಸಭೆಯ ಮೊದಲ ಹಂತದ ಮತದಾನ ಮಂಗಳವಾರ ಮುಕ್ತಾಯವಾಗಿದ್ದು, ಎರಡನೇ ಹಂತದ ಮತದಾನ ನವೆಂಬರ್ 17 ರಂದು ನಡೆಯಲಿದೆ. ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ.