ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಳರ್ ಪರ ಹಣ ಹಂಚಿಕೆ ಆರೋಪ, ಐವರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿದ್ದು ಪೈಪೋಟಿಯ ಅಬ್ಬರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಳರ್ ಪರ ಹಣ ಹಂಚಿಕೆ ಮಾಡಿದ ಆರೋಪದಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅನುಯಾಯಿಗಳು ಮನೆ ಮನೆಗೆ 1000 ರೂಪಾಯಿ ಹಂಚುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಷಯ ತಿಳಿದ ಬಿಜೆಪಿ ಕಾರ್ಯಕರ್ತರು ಪರಾರಿಯಾಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿಯಲಾಗಿದೆ. ಮತದಾರರಿಗೆ ಹಂಚಲು ತಂದಿದ್ದ 20 ಲಕ್ಷ ಹಣದ ಜೊತೆಗೆ ಐವರನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಡಾ. ಮಹಾಂತೇಶ್ ಕಡಾಡಿ, ಭದ್ರಾವತಿ ಮೂಲದ ಇಬ್ಬರು ಯುವಕರು, ಹರ್ಷಾ ಶುಗರ್ಸ್ ಕಾರ್ಖಾನೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!