ದಿಗಂತ ವರದಿ ಮಂಡ್ಯ:
ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಒಟ್ಟು 4019 ಮತಗಳ ಪೈಕಿ ದಿನೇಶ್ ಗೂಳಿಗೌಡರು 2044 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಸಮೀಪ ಸ್ಪರ್ಧಿ ಜೆಡಿಎಸ್ನ ಅಪ್ಪಾಜಿಗೌಡ ಅವರು 1877 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಕೇವಲ 50 ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ.