ರಾಮನಗರದಲ್ಲಿ ಕಾಂಗ್ರೆಸ್ ಬೇರೂರಲು ಸಾಧ್ಯ ಇಲ್ಲ: ಹೆಚ್.ಡಿ. ಕುಮಾರಸ್ವಾಮಿ ಗುಡುಗು

ಹೊಸದಿಗಂತ ವರದಿ, ರಾಮನಗರ:

ಯಾರಿಂದಲೂ ಸರ್ಟಿಫಿಕೇಟ್ ಪಡೆಯುವ ಅವಶ್ಯಕತೆ ನನಗೆ ಇಲ್ಲ. ನನ್ನ ಬಗ್ಗೆ ಯಾರು ಚರ್ಚೆ ಮಾಡಲು ಸಾಧ್ಯವಿಲ್ಲ. ರಾಮನಗರದ ಶಾಸಕನಾಗಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ ಗುಡುಗಿದರು.
ನಗರದಲ್ಲಿ ಭಾನುವಾರ ಖಾಸಗಿ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರೀತಿಯಲ್ಲಿ ಶಾಸಕ ಸ್ಥಾನ ದುರುಪಯೋಗ ಪಡಿಸಿಕೊಂಡಿಲ್ಲ. ಯಾವುದೇ ಸುಳ್ಳು ದಾಖಲೆ ಸೃಷ್ಟಿಸಿ ಭೂಮಿ ಮಾರಾಟ ಮಾಡಿಲ್ಲ. ರಾಮನಗರದಲ್ಲಿ ಶಾಸಕನಾಗಿ ಯಾವ ರೀತಿ ಬದುಕು ನಡೆಸಿದ್ದೇನೋ ಹಾಗೆ ಇವತ್ತು ಸಹ ಬದುಕುತ್ತಿದ್ದೇನೆ ಎಂದರು.
ಈಗ ಕೆರೆಗೆ ನೀರು ತುಂಬುವ ವೇಳೆ ರಾಜಕೀಯ ಮಾಡಿಕೊಂಡು ಹೊರಟಿದ್ದಾರೆ. ಜನ ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದರು.
ರಾಮನಗರದಲ್ಲಿ ಕಾಂಗ್ರೆಸ್ ಬೇರೂರಲು ಸಾಧ್ಯ ಇಲ್ಲ. ಯಾವುದೇ ಕಾರಣಕ್ಕೂ ಇಲ್ಲಿ ಬೇರೂರಲು ಸಾಧ್ಯವಿಲ್ಲ. 24 ರಂದು ಅಧಿವೇಶನ ಮುಗಿಯುತ್ತದೆ. ಬಳಿಕ ರಾಮನಗರ ಪ್ರತಿ ಹಳ್ಳಿಗಳಿಗೆ ಭೇಟಿ ನೀಡುತ್ತೇನೆ. ಸ್ಥಳೀಯ ಸಮಸ್ಯೆಗಳು ಸಣ್ಣಪುಟ್ಟ ಸಮಸ್ಯೆಗಳು ಇರ್ತಾವೆ. ಖುದ್ದಾಗಿ ಜನರ ಬಳಿ ಕುಳಿತು ಸಮಸ್ಯೆಗಳ ಬಗ್ಗೆ ಚರ್ಚಿಸುವೆ ಎಂದರು.
ನಿಖಿಲ್ ಸ್ಪರ್ಧೆಯ ಬಗ್ಗೆ ಜೆಡಿಎಸ್ ಕಾರ್ಯಕರ್ತರುಗಳು ತೀರ್ಮಾನ ಮಾಡ್ತಾರೆ. ನನ್ನ ಕಾರ್ಯಕರ್ತರು ಬಲಾಢ್ಯರಾಗಿದ್ದಾರೆ. ಇನ್ನೂ ಸಮಯವಿದೆ ಆಗ ಕಾರ್ಯಕರ್ತರು ತೀರ್ಮಾನ ಮಾಡುತ್ತಾರೆ. ಅವರು ಹೊರಗೆ ಬರಲು ಏನು ವಾತವರಣದ ಇರಬೇಕು, ಎಲ್ಲವನ್ನೂ ಸರಿಪಡಿಸೋಣ ಎಂದರು.
ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು  ತೆಗೆದುಕೊಂಡು ಶಾಲಾ ಕಾಲೇಜಗುಳನ್ನು ತೆರೆಯಲಿ. ಶಾಲಾ ಕಾಲೇಜುಗಳಲ್ಲಿ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಸೂಕ್ಷ್ಮ ವಿಷಯಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ವಹಿಸಲಿ. ಈ ಹಿಂದಿನಂತೆ ಗಲಾಟೆ ನಡೆಯದಂತೆ ನೋಡಿಕೊಳ್ಳಬೇಕು. ಕಳೆದ ವಾರದ ರೀತಿಯಲ್ಲಿ ಮುಂದುವರಿಯಬಾರದು. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಿ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!