Monday, August 15, 2022

Latest Posts

ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ: ಮಡಿಕೇರಿಯಲ್ಲಿ ಸಂಭ್ರಮಾಚರಣೆ

ಹೊಸದಿಗಂತ ವರದಿ, ಕೊಡಗು:

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಸಂಭ್ರಮಾಚರಣೆ ನಡೆಯಿತು.
ಮಡಿಕೇರಿಯ ಇಂದಿರಾಗಾಂಧಿ ವೃತ್ತದ ಬಳಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಜಯಘೋಷಗಳನ್ನು ಕೂಗಿ ಸಂಭ್ರಮಿಸಿದರು. ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ ರಮೇಶ್, ಬಾಲಚಂದ್ರ ನಾಯರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಎಲ್ಲಪ್ಪ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಸೈನಿಕ ಘಟಕದ ಅಧ್ಯಕ್ಷ ಗಣೇಶ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷಸದಾ ಮುದ್ದಪ್ಪ, ಯುವ ಕಾಂಗ್ರೆಸ್ಸಿನ ಮುದ್ದು ರಾಜು, ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ, ಫ್ಯಾನ್ಸಿ ಪಾರ್ವತಿ, ಬೇಗಮ್, ಎಂ.ಎಂ.ಹನಿಫ್, ಪ್ರಕಾಶ್ ಆಚಾರ್ಯ, ಪುಷ್ಪ ಪೂಣಚ್ಚ, ಜಿ.ಸಿ.ಜಗದೀಶ್, ಕೆ.ಎಂ.ಮಣಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಪಿ ಸುರೇಶ್, ಸೇವಾ ದಳದ ಕಾನೆಹಿತ್ಲು ಮೊಣ್ಣಪ್ಪ, ಕೆ.ಜೆ .ಪೀಟರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss