ಹೊಸದಿಗಂತ ವರದಿ, ಹುಬ್ಬಳ್ಳಿ:
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ೫ ವರ್ಷ ಜವಾಬ್ದಾರಿಯುತ ಸ್ಥಾನ ನಿಭಾಯಿಸಿದರು ಬಹಳ ಕಿಳುಮಟ್ಟದಲ್ಲಿ, ಸಂಸ್ಕೃತಿ ಇಲ್ಲದವರ ಹಾಗೇ ಮಾತನಾಡಿತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರಂಭದಿಂದಲೂ ನಾನು ಹೇಳಿದ್ದೇನೆ ಗೌರವಾನ್ವಿತ ರಾಜಕಾರಣಿಯಾಗಿ ಪುಂಡು, ಪೋಕರಿ ಮತ್ತು ಸಾಮಾನ್ಯ ಕಾರ್ಯಕರ್ತ ಹಾಗೇ ಮಾತನಾಡುವುದು ಸರಿಯಲ್ಲ. ಸಿದ್ದರಾಮಯ್ಯ ಆರ್‌ಎಸ್‌ಎಸ್ ಬಗ್ಗೆ ಟೀಕೆ ಮಾಡಿದರೆ ಅಲ್ಪಸಂಖ್ಯಾರ ಮತ ಬಿಳುತ್ತವೆ ಎಂಬ ಭ್ರಮೆಯಲ್ಲಿಯಲ್ಲಿದ್ದಾರೆ ಎಂದರು.
ಆರ್‌ಎಸ್‌ಎಸ್ ಬಗ್ಗೆ ಸತತ ಟೀಕೆ ಮಾಡುವುದರಿಂದ ಮುಂದಿನ ದಿನದಲ್ಲಿ ಸಿದ್ದರಾಮಯ್ಯನವರಿಗೆ ತಿರುಗುಬಾಣವಾಗುತ್ತದೆ. ಅವರು ಅಲ್ಪಸಖ್ಯಾಂತ ಮತಗಳನ್ನು ಕಳೆದುಕೊಳ್ಳುತ್ತಾರೆ. ಈಗಾಗಲೇ ಕಾಂಗ್ರೆಸ್ ಕ್ಷೀಣಿಸುತ್ತಿದೆ. ಅವರ ಪಕ್ಷದ ಹಲವಾರು ನಾಯಕರು ಪಕ್ಷವನ್ನು ತೊರೆದಿದ್ದಾರೆ. ಭವಿಷ್ಯದಲ್ಲಿ ಸಿದ್ದರಾಮಯ್ಯನವರ ಕಣ್ಣು ಮುಂದೆಯೇ ಕಾಂಗ್ರೆಸ್ ಸಂಪೂರ್ಣ ಮುಕ್ತಯವಾಗುತ್ತದೆ ಎಂದು ಹೇಳಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದಲೇ ಭಾರತ ದೇಶ ಒಗ್ಗಟ್ಟಿನಿಂದ ಇದೆ. ಹಿಂದೂತ್ವಕ್ಕೆ ಸಂಘಟನೆ ಶಕ್ತಿ ಆರ್‌ಎಸ್‌ಎಸ್ ಕೊಟ್ಟಿದೆ. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸಿದ್ದರಾಮಯ್ಯನವರ ಅವನತಿಗೆ ಕಾರಣವಾಗುತ್ತದೆ ಎಂದರು.
ಮೋಹನ ಲಿಂಬಿಕಾಯಿ ಮುನಿಸಿಕೊಂಡಿದ್ದಾರೆ ಎಂಬ ಮಾದ್ಯಮದವರ ಪ್ರಶ್ನೆಗೆ ಪ್ರತಿಕ್ರಿಸಿ ಈ ಕುರಿತು ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ. ಅವರು ಸಹ ಪ್ರಚಾರದಲ್ಲಿ ತೊಡಗುತ್ತಾರೆ ಎಂದು ತಿಳಿಸಿದರು.