ಚುನಾವಣೆಗೂ ಮುನ್ನಾವೇ ಸೋಲು ಒಪ್ಪಿಕೊಂಡ ಕಾಂಗ್ರೆಸ್: ಅಮೇಥಿಯಿಂದ ಹಿಂದೆ ಸರಿದ ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಟಾಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೇಥಿ ಕ್ಷೇತ್ರದಿಂದ ಹಿಂದೆ ಸರಿದ ಬೆನ್ನಲ್ಲೇ ಬಿಜೆಪಿ ವಾಕ್ಸಮರ ಶುರುಮಾಡಿದೆ. ಇದು ಲೋಕಸಭಾ ಚುನಾವಣೆಗೂ ಮುನ್ನಾವೇ ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಹೇಳಿದ್ದಾರೆ.

ಕಾಂಗ್ರೆಸ್ ನಿಷ್ಠಾವಂತ ಕೆ.ಎಲ್.ಶರ್ಮಾಈ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಕ್ಷೇತ್ರದಲ್ಲಿ ಗೆಲುವಿನ ಅವಕಾಶವಿದೆ ಎಂದು ರಾಹುಲ್ ಗಾಂಧಿ ಭಾವಿಸಿದ್ದರೆ, ಇಲ್ಲಿಂದ ಸ್ಪರ್ಧಿಸುತ್ತಿದ್ದರು. ಸೋಲಿನ ಅರಿವಾಗಿ ಅವರ ಆಪ್ತರನ್ನು ಕಣಕ್ಕಿಳಿಸಿದ್ದಾರೆ. ಮೇ 20 ರಂದು ನಡೆಯಲಿರುವ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸುವುದಾಗಿ ಅವರು ಪ್ರತಿಪಾದಿಸಿದರು.

ಅಮೇಥಿ ಜನರು ನರೇಂದ್ರ ಮೋದಿ ಸರ್ಕಾರದಡಿ ಅಭಿವೃದ್ಧಿಯನ್ನು ಕಂಡಿದ್ದಾರೆ, ಕಳೆದ 50 ವರ್ಷಗಳಲ್ಲಿ ಇದು ಏಕೆ ಆಗಲಿಲ್ಲ ಎಂದು ಅಶ್ಚರ್ಯ ವ್ಯಕ್ತಪಡಿಸಿದ ಅವರು, ಈ ಪ್ರದೇಶದಲ್ಲಿ ಗಾಂಧಿ ಕುಟುಂಬದಲ್ಲಿ ಏಕೆ ಹೆಚ್ಚಿನ ಹಾನಿಯನ್ನುಂಟು ಮಾಡಿದರು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದು ಇರಾನಿ ಕೇಳಿದರು.

ವಯನಾಡಿದಲ್ಲಿ ಚುನಾವಣೆ ನಂತರ ರಾಹುಲ್ ಗಾಂಧಿ ಹೊಸ ಕ್ಷೇತ್ರ ನೋಡಿಕೊಳ್ಳಬೇಕಾಗುತ್ತದೆ ಎಂದು ಪ್ರಧಾನಿ ಮೋದಿ ಈಗಾಗಲೇ ಭವಿಷ್ಯ ನುಡಿದಿದ್ದಾರೆ. ಇಂದು ಅದು ಸಂಭವಿಸುವುದನ್ನು ನೀವು ನೋಡುತ್ತಿದ್ದೀರಿ ಎಂದು ಇರಾನಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!