ಅಧಿಕಾರ ಕಳೆದುಕೊಂಡ ಮೇಲೆ ಕಾಂಗ್ರೆಸ್‌ನಿಂದ ಗಲಭೆ ಸೃಷ್ಟಿ: ನಳಿನ್ ಆರೋಪ

ಹೊಸದಿಗಂತ ವರದಿ, ಮಂಗಳೂರು:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಂಡ ಮೇಲೆ ಗಲಭೆಗೆ ಪ್ರಚೋದನೆ ನೀಡುವ ಕೆಲಸ ಮಾಡುತ್ತಿದೆ. ಇದೇ ಕಾರಣಕ್ಕೆ ರಾಜ್ಯ ಸರ್ಕಾರದ ಪಠ್ಯ ಪುಸ್ತಕ ಪರಿಷ್ಕರಣೆ, ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥರ ಕಾರ್ಯಕ್ರಮಕ್ಕೆ ತಡೆ ಮಾಡುವುದನ್ನು ಮುಂದುವರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಗಲಭೆಗಳ ಹಿಂದೆ ಕಾಂಗ್ರೆಸ್‌ನ ದ್ವೇಷ ರಾಜಕಾರಣದ ಕೈವಾಡ ಇದೆ. ಕಾಂಗ್ರೆಸ್ ಅರಾಜಕತೆಯನ್ನು ಬಯಸುತ್ತಿದ್ದು, ಎಲ್ಲದಕ್ಕೂ ಮೊದಲು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಏನಿದೆ ಎಂಬುದನ್ನು ವಿರೋಧಿಸುವವರು ತಿಳಿದುಕೊಳ್ಳಲಿ ಎಂದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ನಳಿನ್, ನಾವು ಕಾಂಗ್ರೆಸ್ ಮಕ್ಕಳನ್ನು ಸೇನೆಗೆ ಸೇರಿಕೊಳ್ಳಿ ಎಂದು ಕೇಳಿಲ್ಲ. ಉದ್ಯೋಗಾಕಾಂಕ್ಷಿಗಳು, ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವ ಬಯಕೆಯುಳ್ಳವರು ಹಾಗೂ ರಾಷ್ಟ್ರಕ್ಕಾಗಿ ದುಡಿಯುವವರಿಗೆ `ಅಗ್ನಿಪಥ’ ಯೋಜನೆಯಲ್ಲಿ ಅವಕಾಶವಿದೆ ಎಂದು ಕಾಂಗ್ರೆಸ್ ಮುಖಂಡರಿಗೆ ತಿರುಗೇಟು ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!