ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ಎಸ್ ಗೆ ತ್ರೀವ ಮುಖಭಂಗವಾಗಿದ್ದು, ಕಾಂಗ್ರೆಸ್ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಹುಮತದ ಗಡಿ ದಾಟಿದೆ. ಕಾರ್ಯಕರ್ತರು ಹೈದರಾಬಾದ್‌ನಲ್ಲಿ ವಿಜಯೋತ್ಸವ ಆಚರಿಸುತ್ತಿದ್ದಾರೆ.
ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರೇವಂತ್ ರೆಡ್ಡಿ ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಿದರು.
ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ಎ. ರೇವಂತ್ ರೆಡ್ಡಿ ಅವರ ಮನೆ ಮತ್ತು ಕಾಂಗ್ರೆಸ್ ಪ್ರಧಾನ ಕಚೇರಿ ಗಾಂಧಿ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು .
ಇತ್ತ ರೇವಂತ್ ರೆಡ್ಡಿ ಸಿಎಂ ಹುದ್ದೆ ರೇಸ್ನಲ್ಲಿ ಮುಂಚೂಣಿಯಲ್ಲಿರುವುದು ಗಮನಾರ್ಹ. ಕಾಂಗ್ರೆಸ್ ನಾಯಕರು ಮೊದಲು ರಾಜ್ಯ ಡಿಜಿಪಿ ಅಂಜನಿ ಕುಮಾರ್ ಅವರನ್ನು ಭೇಟಿ ಮಾಡಿ ನಂತರ ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಿದರು. ಹೈದರಾಬಾದ್‌ನಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಿದ ತಕ್ಷಣ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ರಾಜ್ಯಾಧ್ಯಕ್ಷ ರೇವಂತ್ ರೆಡ್ಡಿ ಪರ ‘ಸಿಎಂ-ಸಿಎಂ’ ಘೋಷಣೆಗಳನ್ನು ಕೂಗಿದರು. ತೆಲಂಗಾಣದ ಒಟ್ಟು 119 ಸ್ಥಾನಗಳ ಪೈಕಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಬಿಆರ್‌ಎಸ್ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 8 ಸ್ಥಾನಗಳಲ್ಲಿ ಮುಂದಿದೆ.