ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹದಾಯಿ ಯೋಜನೆ ವಿಳಂಬವಾಗಲು ಕಾಂಗ್ರೆಸ್ ನೇರ ಹೊಣೆ. ಈ ಪ್ರಕರಣದಲ್ಲಿ ನ್ಯಾಯಾಲಯದ ಮೊರೆ ಹೋಗುವ ಅವಶ್ಯಕತೆ ಇರಲಿಲ್ಲ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದು ಕಾಂಗ್ರೆಸ್ ಸರ್ಕಾರ ಎಂದು ಮಾಜಿ ಸಿಎಂ ಬಸವರಾಜ ಬೋಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ್ಯಾಯಾಲಯದ ಮೊರೆ ಹೋಗಿದ್ದರಿಂದ ಮಹದಾಯಿ ಯೋಜನೆ 8ರಿಂದ 10 ವರ್ಷ ವಿಳಂಬವಾಗುತ್ತಿದೆ.
ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ದೊಡ್ಡ ಅಪರಾಧ ಮಾಡಿದೆ. ಮಹದಾಯಿ ಮತ್ತು ಮಲಪ್ರಭಾ ನಡುವೆ ಸಂಪರ್ಕ ಲಿಂಕಿಂಗ್ ಕಾಲುವೆ ಸ್ಥಾಪಿಸಿದ್ದೇವು, ನಾವು ಮಾಡಿದ್ದ ಇಂಟರ್ ಲಿಂಕಿಂಗ್ ಕಾಲುವೆಗೆ ಕಾಂಗ್ರೆಸ್ ಗೋಡೆ ಕಟ್ಟಿದೆ ಎಂದು ಕಿಡಿಕಾರಿದ್ದಾರೆ.