ಪೇಸಿಎಂ ಅಭಿಯಾನದ ಹೆಸರಿನಲ್ಲಿ ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್: ಸಿಎಂ ಬೊಮ್ಮಾಯಿ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪೇಸಿಎಂ ಅಭಿಯಾನದ ಹೆಸರಿನಲ್ಲಿ ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಿಡಿಕಾರಿದರು.
ಸಿರಿಗೆರೆ ಹಿರಿಯ ಗುರುಗಳ ಸ್ಮರಣೆ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಅವರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಯಾವುದೇ ಸಮಸ್ಯೆ ಇದ್ದಲ್ಲಿ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲಿ. ಆ ಕುರಿತು ತನಿಖೆ ನಡೆಸಲಾಗುವುದು ಎಂದರು.
ಅದನ್ನು ಬಿಟ್ಟು ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ. ಅಧಿಕಾರವಿಲ್ಲದೆ ಹತಾಶರಾಗಿರುವ ಕಾಂಗ್ರೆಸಿನವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರಿಗೆ ಬೇರೆ ಯಾವುದೇ ವಿಚಾರಗಳಿಲ್ಲ. ಹಾಗಾಗಿ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಸಂಪುಟ ವಿಸ್ತರಣೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೆಹಲಿಗೆ ಹೋದಾಗ ಈ ಕುರಿತು ಚರ್ಚೆ ನಡೆಸಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!