ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಪಾಲರ ಘನತೆಯನ್ನ ಕಾಂಗ್ರೆಸ್‌ನವರು ಹಾಳು ಮಾಡಲು ಹೊರಟಿದ್ದಾರೆ ಎಂದು ಜೆಡಿಎಸ್ ಯುವಕ ನಾಯಕ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಪಾಲರನ್ನ ಕಾಂಗ್ರೆಸ್ ಶಾಸಕರು ಅಡ್ಡಗಟ್ಟಿ ಧಿಕ್ಕಾರ ಕೂಗಿದ ವಿಚಾರ ಕುರಿತು ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ, ಕೇಂದ್ರ ಸಂಘರ್ಷ ಮಾಡಿಕೊಂಡು ಹೋದ್ರೆ ರಾಜ್ಯದ ಜನತೆಯೇ ಬಡವಾಗುತ್ತಾರೆ. ತುಮಕೂರಿನಲ್ಲಿ ಸ್ಟೇಡಿಯಂ ಹೆಸರು ಬದಲಾವಣೆ ಆಯ್ತು. ಮಹಾತ್ಮ ಗಾಂಧಿ ಹೆಸರು ಬದಲಾವಣೆ ಮಾಡಿರೋದು ನಿಮ್ಮ ನಾಯಕರೇ. ಅದರ ಬಗ್ಗೆ ಯಾಕೆ ಮಾತನಾಡುವುದಿಲ್ಲ. ಕಾಂಗ್ರೆಸ್‌ನವರು ಯಾಕೆ ಈ ವಿಚಾರದಲ್ಲಿ ಡಬಲ್ ಸ್ಟ್ಯಾಂಡ್ ತೆಗೆದುಕೊಂಡಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಮುಂದಿನ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸುವ ವಿಚಾರ ಕುರಿತು ಮಾತನಾಡಿ, ಸ್ವಾಭಾವಿಕವಾಗಿ ಜನ ಪ್ರೀತಿಯಿಂದ ಹೇಳುತ್ತಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಮುಖಂಡರಲ್ಲೇ ಓವರ್ ಕಾನ್ಫಿಡೆನ್ಸ್ ಇತ್ತು. ಅದನ್ನ ಅವರೇ ಒಪ್ಪಿಕೊಳ್ಳುತ್ತಾರೆ. ಆದರೂ ಸ್ವಲ್ಪ ಎಡವಿದ್ರು. ಎಲ್ಲವನ್ನೂ ಸರಿಪಡಿಸಿ ಮೊದಲು ಪಕ್ಷ ಅಧಿಕಾರಕ್ಕೆ ತರುತ್ತೇವೆ ಎಂದರು.


