ಚುನಾವಣೆ ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ಎರಡು ಭಾಗ: ಬೊಮ್ಮಾಯಿ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆ ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ (Congress will be divided). ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ (Congress Government Collapse) ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ ಉದಾಸಿಯವರು ಈ ಕ್ಷೇತ್ರದಲ್ಲಿ ಸಾಕಷ್ಡು ಅಭಿವೃದ್ಧಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾದ ನಂತರ ನೂರಕ್ಕೆ ನೂರು ಕೇಂದ್ರದ ಎಲ್ಲ ಯೋಜನೆಗಳನ್ನು ಈ ಕ್ಷೇತ್ರದಲ್ಲಿ ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಕೆ ಎಸ್ ಈಶ್ವರಪ್ಪ ಅವರು ಹಿರಿಯರಿದ್ದಾರೆ ಪಕ್ಷ ಕಟ್ಟುವಲ್ಲಿ ಅವರ ಪಾತ್ರ ದೊಡ್ಡದಿದೆ. ಪಕ್ಷದ ಮುಖಂಡರು ಅವರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಸಮಯವಿದೆ. ಅವರು ಪಕ್ಷದ ತೀರ್ಮಾನವನ್ನು ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಹಾವೇರಿ ಕ್ಷೇತ್ರದಲ್ಲಿ ತಾವು ಮನಸಿಲ್ಲದೇ ಸ್ಪರ್ಧೆ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ಪರ್ಧೆ ಮಾಡುವಂತೆ ವರಿಷ್ಠರು ಸೂಚನೆ ಕೊಟ್ಟಾಗ ಇಲ್ಲಿ ನನ್ನ ಮನಸ್ಸಿನ ಪ್ರಶ್ನೆ ಬರುವುದಿಲ್ಲ. ವರಿಷ್ಠರ ಸೂಚನೆ ಪಾಲಿಸುವುದು ನನ್ನ ಕರ್ತವ್ಯ. ಅದಕ್ಕಾಗಿ ಕರ್ತವ್ಯ ಪಾಲಿಸುತ್ತಿದ್ದೇನೆ ಎಂದು ಹೇಳಿದರು .

ಎಲ್ಲಿ ಗೆಲ್ಲುವ ವಿಶ್ವಾಸ ಇರುತ್ತದೆಯೋ ಅಲ್ಲಿ ಪೈಪೋಟಿ ಇರುತ್ತದೆ. ಕಾಂಗ್ರೆಸ್ ಗೆ ಇಲ್ಲಿ ಗೆಲ್ಲುವ ವಿಶ್ವಾಸ ಇಲ್ಲ ಹೀಗಾಗಿ ಅಲ್ಲಿ ಬಂಡಾಯದ ಪ್ರಶ್ನೆ ಬರುವುದಿಲ್ಲ ಎಂದು ಬಿಜೆಪಿಯ ಬಂಡಾಯದ ಬಗ್ಗೆ ಮಾತನಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!